ಸೋಮವಾರಪೇಟೆ: ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ನಡೆಸಿದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಸೂರ್ಲಬಿ ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.
ಡಿಸ್ಕಸ್ ಥ್ರೋ ವಿಭಾಗದಲ್ಲಿ ಸಿ.ಎ. ಡೈನಿ ಹಾಗೂ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ಎನ್.ಬಿ. ರುಕ್ಮಿಣಿ ಅವರುಗಳು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ನಾಪೋಕ್ಲು: ಮಡಿಕೇರಿಯ ಸಂತ ಜೋಸೆಫರ ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲೋತ್ಸವ ಸ್ಪರ್ಧೆಯಲ್ಲಿ ಎಮ್ಮೆಮಾಡಿನ ಎಸ್.ಎಸ್.ವಿ. ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು ಕವ್ವಾಲಿ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಗಳಿಸಿ ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸೋಮವಾರಪೇಟೆ: ಅಪರಾಧ ತಡೆ ಕುರಿತಂತೆ ಇಲ್ಲಿನ ಪೊಲೀಸ್ ಇಲಾಖೆಯ ವತಿಯಿಂದ ಜ್ಞಾನವಿಕಾಸ ಶಾಲೆಯಲ್ಲಿ ಪ್ರಬಂಧ ಸ್ಪರ್ಧೆ ಆಯೋಜಿಸಿ, ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ರುತು ಪ್ರಥಮ, 9ನೇ ತರಗತಿಯ ಮೌಲ್ಯ ದ್ವಿತೀಯ, ಪ್ರೇಕ್ಷಿತ ತೃತೀಯ ಬಹುಮಾನ ಪಡೆದರು.
 
						