ಮಡಿಕೇರಿ, ಅ. 5: ನಾಡಹಬ್ಬ ದಸರಾ ಸಮೀಪಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಇಲ್ಲಿನ ಕಾವೇರಿ ಕಲಾಕ್ಷೇತ್ರದಲ್ಲಿರುವ ದಸರಾ ಸಮಿತಿ ಕಚೇರಿಯಲ್ಲಿ ಗಣಹೋಮ ನಡೆಸುವದರೊಂದಿಗೆ ಕಚೇರಿ ಚಟುವಟಿಕೆಗೆ ಚಾಲನೆ ನೀಡಲಾಯಿತು. ವಿಜಯವಿನಾಯಕ ದೇವಾಲಯದ ಪ್ರಧಾನ ಅರ್ಚಕ ಶ್ರೀಕೃಷ್ಣ ಉಪಾಧ್ಯಾಯ ಪೂಜಾದಿ ಕಾರ್ಯಗಳನ್ನು ನೆರವೇರಿಸಿದರು.
ಈ ಸಂದರ್ಭ ದಸರಾ ಸಮಿತಿ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ, ಕಾರ್ಯಾಧ್ಯಕ್ಷ ಮಹೇಶ್ ಜೈನಿ, ಕಾರ್ಯದರ್ಶಿ ಚುಮ್ಮಿ ದೇವಯ್ಯ, ಖಜಾಂಚಿ ಸಂಗೀತ ಪ್ರಸನ್ನ, ದಶಮಂಟಪ ಸಮಿತಿ ಅಧ್ಯಕ್ಷ ರವಿಕುಮಾರ್, ಪದಾಧಿಕಾರಿಗಳು, ಉಪಸಮಿತಿಗಳ ಅಧ್ಯಕ್ಷರು, ಸದಸ್ಯರು ಪಾಲ್ಗೊಂಡಿದ್ದರು.