ಸೋಮವಾರಪೇಟೆ,ಅ.5 : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ಕಾರ್ಯಕ್ರಮದಡಿ ಗುಡ್ಡೆಹೊಸೂರಿನ ಬಸವನಹಳ್ಳಿ ಗ್ರಾಮದಲ್ಲಿ ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ಕಾರ್ಯಾಗಾರ ಮತ್ತು ಗಾಂಧಿ ಜಯಂತಿ ಕಾರ್ಯಕ್ರಮ ನಡೆಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ, ಅಭಿವೃದ್ಧಿ ಅಧಿಕಾರಿ ಶ್ಯಾಂ, ಯೋಜನೆಯ ಸಮನ್ವಯ ಅಧಿಕಾರಿ ಪದ್ಮ ಸೇರಿದಂತೆ ಇತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಮಹಿಳಾ ಸಬಲೀಕರಣದ ಬಗ್ಗೆ ಮಾಹಿತಿ ನೀಡಿದರು.