ಸೋಮವಾರಪೇಟೆ,ಅ.5: ಸಮೀಪದ ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸಭೆ ತಾ.6ರಂದು ಪೂರ್ವಾಹ್ನ 11 ಗಂಟೆಗೆ ತೋಳೂರುಶೆಟ್ಟಳ್ಳಿಯ ವಿಎಸ್‍ಎಸ್‍ಬಿಎನ್ ಸಭಾಂಗಣದಲ್ಲಿ ಅಧ್ಯಕ್ಷೆ ವಿ.ಜೆ. ಭಾರತಿ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಸಭೆಯಲ್ಲಿ ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯ ಬಿ.ಎ. ಧರ್ಮಪ್ಪ, ನೋಡಲ್ ಅಧಿಕಾರಿಯಾಗಿ ಪಶುವೈದ್ಯ ಇಲಾಖೆಯ ಸಹಾಯಕ ನಿರ್ದೇಶಕಿ ಶೈಲಜಾ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.