ಮಡಿಕೇರಿ, ಅ. 5: ಪ್ರವಾಸೋದ್ಯಮ ಇಲಾಖೆಯಿಂದ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ವರ್ಗಕ್ಕೆ ಸೇರಿದ ವಿದ್ಯಾವಂತ ನಿರುದ್ಯೋಗ ಯುವಕ-ಯುವತಿಯರಿಗೆ 2018-19ನೇ ಸಾಲಿನಲ್ಲಿ ಪ್ರವಾಸಿ ಟ್ಯಾಕ್ಸಿ ವಿತರಿಸುವ ಸಂಬಂಧ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ಮೂಲ ದಾಖಲಾತಿಗಳ ಪರಿಶೀಲನೆಯು ತಾ. 5 ರಂದು ಮಡಿಕೇರಿ ಉಪ ವಿಭಾಗಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆಸಲು ಉದ್ದೇಶಿಸಲಾಗಿತ್ತು, ಆದರೆ ಸ್ಥಳೀಯ ಸಂಸ್ಥೆಗಳ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಕಾರಣ ತಾ. 5 ರಂದು ನಡೆಯಬೇಕಿದ್ದ ಪ್ರವಾಸಿಟ್ಯಾಕ್ಸಿ ಯೋಜನೆಯ ಅರ್ಜಿದಾರರ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಮುಂದೂಡಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.