ಮಡಿಕೇರಿ, ಅ. 5: ಮಕ್ಕಂದೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ತಾತ್ಕಾಲಿಕವಾಗಿ ನಡೆಸುತ್ತಿರುವ ವಿದ್ಯಾರ್ಥಿನಿಲಯಕ್ಕೆ ಹಾಸನದ ಕುವೆಂಪು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿಗಳಾದ ಶಿವರಾಮೇಗೌಡ ತಮ್ಮ ಸಂಸ್ಥೆಯ ಪರವಾಗಿ ಶಾಲಾ ಶೈಕ್ಷಣಿಕ ಚಟುವಟಿಕೆಗಳಿಗೆ ಹಾಗೂ ಶಾಲಾಭಿವೃದ್ಧಿಗಾಗಿ ರೂ. 50 ಸಾವಿರಗಳ ಡಿಡಿಯನ್ನು ಪ್ರೌಢ ಶಾಲಾ ಮುಖ್ಯ ಶಿಕ್ಷಕರಿಗೆ ಮಡಿಕೇರಿ ತಾಲೂಕಿನ ಕ್ಷೇತ್ರ ಶಿP್ಪ್ಷಣಾಧಿಕಾರಿಗಳಾದ ಟಿ.ಎನ್. ಗಾಯತ್ರಿ ಹಾಗೂ ಶಿಕ್ಷಣ ಇಲಾಖೆಯ ನಿವೃತ್ತ ನಿರ್ದೇಶಕರಾದ ಬಿ.ಟಿ.ಪೆಮ್ಮಯ್ಯ ಅವರ ಉಪಸ್ಥಿತಿಯಲ್ಲಿ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಸಿ.ಕೆ. ಉಷಾ ಅವರಿಗೆ ಹಸ್ತಾಂತರಿಸಿ ಈ ಮೊತ್ತವನ್ನು ಸದುಪಯೋಗಪಡಿಸಿಕೊಳ್ಳುವಂತೆ ತಿಳಿಸಿದರು.

ನಂತರ ಮಾತನಾಡಿದ ಹಾಸನದ ಕುವೆಂಪು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಶಿವರಾಮೇಗೌಡ ಅವರು ಸಂತ್ರಸ್ತ ವಿದ್ಯಾರ್ಥಿಗಳಿಗೆ ಮನಸ್ಥೈರ್ಯ ತುಂಬಿ ಕಲಿಕೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಂಡು ಆದರ್ಶ ಪ್ರಜೆಗಳಾಗುವಂತೆ ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಎಸ್‍ಡಿಎಂಸಿ ಅಧ್ಯಕ್ಷರು, ಪದಾಧಿಕಾರಿಗಳು, ಶಿಕ್ಷಕ ವೃಂದದವರು, ಪಿಯುಸಿ ವಿಭಾಗದ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದದವರು, ಶಾಲಾ ವಿದ್ಯಾರ್ಥಿಗಳು ಹಾಗೂ ಪೋಷಕರು ಹಾಜರಿದ್ದರು.