ಸೋಮವಾರಪೇಟೆ, ಅ. 5: ಸಮೀಪದ ತಣ್ಣೀರುಹಳ್ಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಸಪ್ತಾಹ, ಮಾತೃ ವಂದನಾ ಮತ್ತು ಸೀಮಂತ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಸ.ಹಿ.ಪ್ರಾ. ಶಾಲೆಯ ಮುಖ್ಯೋಪಾಧ್ಯಾಯ ಟಿ.ಡಿ. ನರೇಂದ್ರನಾಥ್, ಸಹ ಶಿಕ್ಷಕರಾದ ಎಸ್.ಕೆ. ಉದಯ, ಅಂಗನವಾಡಿ ಕಾರ್ಯಕರ್ತೆ ಕುಸುಮ, ಬಾಲ ವಿಕಾಸ ಸಮಿತಿ ಮಾಜಿ ಅಧ್ಯಕ್ಷೆ ಉಷಾ, ಬಸವೇಶ್ವರ ಯುವಕ ಸಂಘದ ಅಧ್ಯಕ್ಷ ಕಿಶೋರ್, ಸ್ತ್ರೀ ಶಕ್ತಿ ಸಂಘದ ಸದಸ್ಯರು, ಗರ್ಭಿಣಿ, ಬಾಣಂತಿಯರು ಉಪಸ್ಥಿತರಿದ್ದರು. ಗರ್ಭಿಣಿ ಮತ್ತು ಬಾಣಂತಿಯರು ಪೌಷ್ಟಿಕಾಂಶಯುಕ್ತ ಆಹಾರವನ್ನು ಸೇವಿಸಬೇಕು. ಪರಿಸರ ಮತ್ತು ವೈಯುಕ್ತಿಕ ಸ್ವಚ್ಛತೆಗೆ ಆದ್ಯತೆ ನೀಡಬೇಕು ಎಂದು ಆರೋಗ್ಯ ಇಲಾಖೆಯ ಶುಶ್ರೂಷಕಿ ಲಲಿತ ಹೇಳಿದರು.