ಮಡಿಕೇರಿ, ಅ. 5: ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆ ವತಿಯಿಂದ ಹುಚ್ಚು ನಾಯಿ ರೋಗದ (ರೇಬೀಸ್) ಬಗ್ಗೆ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಮತ್ತು ಸಾರ್ವಜನಿಕರಿಗೆ ಜಾಗೃತಿ ಶಿಬಿರ ಏರ್ಪಡಿಸಲಾಗಿದೆ.

ಸಭಾ ಕಾರ್ಯಕ್ರಮ ತಾ. 6 ರಂದು ಪೂರ್ವಾಹ್ನ 9.45 ಗಂಟೆಗೆ ಲೀಡ್ ಬ್ಯಾಂಕ್ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಶಿಬಿರದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಉದ್ಘಾಟಿಸಲಿ ದ್ದಾರೆ. ಮುಖ್ಯ ಅತಿಥಿಗಳಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಪಣ್ಣೇಕರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಎಂ.ಎಲ್. ಮಂಜುನಾಥ್, ಜಿಲ್ಲಾ ಲೀಡ್ ಬ್ಯಾಂಕ್ ವ್ಯವಸ್ಥಾಪಕ ಕೆ.ಎನ್. ವಿ.ಎಸ್.ಬಿ. ಗುಪ್ತಾಜಿ, ಪಶುಪಾಲನಾ ಇಲಾಖೆ ಉಪ ನಿರ್ದೇಶಕ ಎ.ಬಿ. ತಮ್ಮಯ್ಯ ಹಾಗೂ ಸುಳ್ಯದ ಪಶು ವೈದ್ಯಾಧಿಕಾರಿ ಡಾ. ನಿತಿನ್ ಪ್ರಭು ರೇಬೀಸ್ ರೋಗದ ಬಗ್ಗೆ ಉಪನ್ಯಾಸ ನೀಡಲಿದ್ದಾರೆ.