ಬೆಂಗಳೂರಿನ ಅಭಿಮಾನಿ ಪ್ರಕಾಶನ ಸಂಸ್ಥೆಯು ರಾಜ್ಯ ಮತ್ತು ಜಿಲ್ಲಾ ಮಟ್ಟದ ಕನ್ನಡ ಪತ್ರಿಕೆಗಳಲ್ಲಿ ‘ಸಾಮಾಜಿಕ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಹಾಗೂ ಮೈಸೂರಿನ ‘ಮೈಸೂರು ದಿಗಂತ’ ಪತ್ರಿಕಾ ಸಂಸ್ಥೆಯು ‘ಮಾನವೀಯ ಸಮಸ್ಯೆ’ಗಳನ್ನು ಪರಿಣಾಮಕಾರಿಯಾಗಿ ಪ್ರತಿಬಿಂಬಿಸುವ ಲೇಖನ-ವರದಿಗಳನ್ನು ಬರೆದ ಪತ್ರಕರ್ತರಿಗೆ ಪ್ರತಿವರ್ಷ ತಲಾ ಹತ್ತು ಸಾವಿರ ರೂ.ಗಳ ನಗದು ಪ್ರಶಸ್ತಿ ನೀಡಲು ತಲಾ ಒಂದು ಲಕ್ಷ ರೂ.ಗಳ ದತ್ತಿಯನ್ನು ಕರ್ನಾಟಕ ಮಾಧ್ಯಮ ಅಕಾಡೆಮಿಯಲ್ಲಿ ಸ್ಥಾಪಿಸಿದ್ದು, 2018ರ ಜನವರಿ ಪ್ರಾರಂಭದಿಂದ ಸೆಪ್ಟೆಂಬರ್-2018 ಅಂತ್ಯದವರೆಗೆ ಪ್ರಕಟವಾಗಿರುವ ‘ಸಾಮಾಜಿಕ ಸಮಸ್ಯೆ’ಗಳನ್ನು ಪ್ರತಿಬಿಂಬಿಸುವ ಲೇಖನ-ವರದಿ ‘ಅಭಿಮಾನಿ ಪ್ರಶಸ್ತಿ-2018’ ಎಂದು ದಾಖಲಿಸಿ, ಹಾಗೂ ಇದೇ ಅವಧಿಯ ‘ಮಾನವೀಯ ಸಮಸ್ಯೆ’ಗಳನ್ನು ಪ್ರತಿಬಿಂಬಿಸುವ ಒಂದು ಲೇಖನ-ವರದಿ ‘ಮೈಸೂರು ದಿಗಂತ ಪ್ರಶಸ್ತಿ-2018’ ದಾಖಲಿಸಿ ಪ್ರತ್ಯೇಕವಾಗಿ ಕಳುಹಿಸಬೇಕು.

ಕನ್ನಡ ದೈನಿಕ-ವಾರ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರು ಬರೆದಿರುವ ವರದಿ ಲೇಖನಿಗಳಿಗೆ ಮಾತ್ರ ಪ್ರಶಸ್ತಿಗೆ ಅವಕಾಶ. ಲೇಖನ-ವರದಿಗಳಲ್ಲಿ ಹೆಸರು(ಬೈಲೈನ್) ಪ್ರಕಟವಾಗದಿದ್ದಲ್ಲಿ ಸಂಬಂಧಿಸಿದ ಪತ್ರಿಕೆಯ ಸಂಪಾದಕರಿಂದ ದೃಢೀಕರಣ ಪತ್ರವನ್ನು ಪಡೆದು ಕಳುಹಿಸಬೇಕು.

ಲೇಖನ-ವರದಿಗಳನ್ನು 2018ರ ತಾ. 26 ರೊಳಗೆ ಕಾರ್ಯದರ್ಶಿ, ಕರ್ನಾಟಕ ಮಾಧ್ಯಮ ಅಕಾಡೆಮಿ, ಪೋಡಿಯಂ ಬ್ಲಾಕ್, ವಿಶ್ವೇಶ್ವರಯ್ಯ ಕೇಂದ್ರ ಡಾ.ಬಿ.ಆರ್.ಅಂಬೇಡ್ಕರ್ ವೀಧಿ, ಬೆಂಗಳೂರು-560001. ಇವರಿಗೆ ಕಳುಹಿಸಲು ಅಕಾಡೆಮಿಯ ಅಧ್ಯಕ್ಷ ಎಂ.ಸಿದ್ದರಾಜು ಅವರು ಕೋರಿದ್ದಾರೆ. ಲಕೋಟೆಯ ಮೇಲೆ ‘ಅಭಿಮಾನಿ ಪ್ರಶಸ್ತಿ-2018’ ಹಾಗೂ ‘ಮೈಸೂರು ದಿಗಂತ ಪ್ರಶಸ್ತಿ-2018’ ಎಂದು ನಮೂದಿಸಿ ಕಳುಹಿಸುವಂತೆ ಕರ್ನಾಟಕ ಮಾಧ್ಯಮ ಅಕಾಡೆಮಿಯ ಕಾರ್ಯದರ್ಶಿ ಎಸ್. ಶಂಕರಪ್ಪ ತಿಳಿಸಿದ್ದಾರೆ.

ಶಿಷ್ಯ ವೇತನಕ್ಕೆ

ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನ’, ಶುಲ್ಕ ವಿನಾಯಿತಿ, ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ವೆಬ್‍ಸೈಟ್ ವಿಳಾಸ ತಿತಿತಿ.ಞಚಿಡಿeಠಿಚಿss.ಛಿgg.gov.iಟಿ ಹಾಗೂ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗೆ ತಿತಿತಿ.bಚಿಛಿಞತಿಚಿಡಿಜಛಿಟಚಿsses.ಞಚಿಡಿ.ಟಿiಛಿ.iಟಿ ನ್ನು ಹಾಗೂ ಸಹಾಯವಾಣಿ ಸಂಖ್ಯೆ 8050770005/8050770004 ನ್ನು ಸಂಪರ್ಕಿಸಬಹುದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಆಯುಕ್ತರು ತಿಳಿಸಿದ್ದಾರೆ.

ವಿದ್ಯಾರ್ಥಿ ವೇತನಕ್ಕೆ

ಅಲ್ಪಸಂಖ್ಯಾತರ ನಿರ್ದೇಶನಾಲಯ ವತಿಯಿಂದ 2018-19ನೇ ಸಾಲಿನಲ್ಲಿ ಮೆಟ್ರಿಕ್ ಪೂರ್ವ (1 ರಿಂದ 10ನೇ ತರಗತಿ) ಮತ್ತು ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ (ಪಿಯುಸಿ ಮತ್ತು ನಂತರದ ತರಗತಿಯಲ್ಲಿ) ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಪಾರ್ಸಿ, ಜೈನ್, ಬೌದ್ಧ ಸಮುದಾಯದ ವಿದ್ಯಾರ್ಥಿಗಳಿಗೆ “ಅಲ್ಪಸಂಖ್ಯಾತರ ವಿದ್ಯಾರ್ಥಿ ವೇತನ ಯೋಜನೆ” ಯಡಿ ಅರ್ಜಿ ಆಹ್ವಾನಿಸಲಾಗಿದೆ.

ಭರ್ತಿ ಮಾಡಿದ ಅರ್ಜಿಗಳನ್ನು ದಾಖಲಾತಿಗಳೊಂದಿಗೆ ಸೆಪ್ಟೆಂಬರ್ 30 ರೊಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಆದರೆ ಈ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕವನ್ನು ಅಕ್ಟೋಬರ್, 31 ರವರೆಗೆ ವಿಸ್ತರಿಸಲಾಗಿದೆ. ಅಗತ್ಯ ಮಾಹಿತಿಗೆ ಇಲಾಖಾ ವೆಬ್‍ಸೈಟ್ ತಿತಿತಿ.goಞಜom.ಞಚಿಡಿ.ಟಿiಛಿ.iಟಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, “ಮಾಹಿತಿ ಕೇಂದ್ರ” ಮೌಲಾನಾ ಅಜಾದ್ ಭವನ, ಎಫ್.ಎಂ.ಸಿ. ಕಾಲೇಜು ಹತ್ತಿರ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿ ದೂರವಾಣಿ ಸಂಖ್ಯೆ: 08272-220214 ನ್ನು ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವಿನ್ ಅವರು ತಿಳಿಸಿದ್ದಾರೆ.