ಸುಂಟಿಕೊಪ್ಪ, ಅ. 5: ಸರಕಾರಿ ಪದವಿಪೂರ್ವ ಕಾಲೇಜಿನ ಕಾಲೇಜಿನ ಹೆಚ್ಚುವರಿ ಕೊಠಡಿ ಮತ್ತು ತಡೆಗೋಡೆ ಕಾಮಗಾರಿಯ ಪ್ರಗತಿ ಬಗ್ಗೆ ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಭೇಟಿ ನೀಡಿ ಪರಿಶೀಲಿಸಿದ್ದರು. ಉಳಿದ ಕಾಮಗಾರಿ ಕೆಲಸವನ್ನು ಚುರುಕುಗೊಳಿಸುವಂತೆ ಸೂಚಿಸಿದರು. ಈ ಸಂದರ್ಭ ಮಾತನಾಡಿದ ಕಾಲೇಜಿನ ಪ್ರಾಚಾರ್ಯ ಜಾನ್ ಮುಂದಿನ ಶೈಕ್ಷಣಿಕ ಸಾಲಿನಿಂದ ಈ ಕಾಲೇಜಿಗೆ ವಾಣಿಜ್ಯ ತರಗತಿ ಆರಂಭಿಸಲು ಪಿಯು ಮಂಡಳಿಯಿಂದ ಆದೇಶ ಬಂದಿದೆ ಎಂದು ಶಾಸಕರಿಗೆ ತಿಳಿಸಿದರು. ಉಪನ್ಯಾಸಕÀ ಸೋಮಚಂದ್ರ, ಫಿಲಿಪ್ ವಾಸ್, ಸುಂಟಿಕೊಪ್ಪ ಗ್ರಾಮ ಪಂಚಾಯಿತಿ ಸದಸ್ಯ ಚಂದ್ರ ಹಾಜರಿದ್ದರು.