ಮಡಿಕೇರಿ, ಅ. 6: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನಾ ಕಚೇರಿ, ಪೊನ್ನಂಪೇಟೆಯಲ್ಲಿ 18 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 36 ಸಹಾಯಕಿಯರನ್ನು ಗೌರವಧನ ಆಧಾರದ ಮೇಲೆ ಗುರುತಿಸಲು ಅರ್ಹ ಮಹಿಳೆಯರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ತಾ. 30 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್‍ಸೈಟ್ : ತಿತಿತಿ.ಚಿಟಿgಚಿಟಿತಿಚಿಜi ಡಿeಛಿಡಿuiಣ.ಞಚಿಡಿ.ಟಿiಛಿ.iಟಿ ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ಪೊನ್ನಂಪೇಟೆ (ದೂ. 08274-249010, 249788) ನ್ನು ಸಂಪರ್ಕಿಸಬಹುದು ಎಂದು ಪೊನ್ನಂಪೇಟೆ ಸಮಗ್ರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅವರು ತಿಳಿಸಿದ್ದಾರೆ.