ಭಾಗಮಂಡಲ, ಅ. 6: ತಲಕಾವೇರಿ ಜಾತ್ರೆ ಸಂಬಂಧ ಕ್ಷೇತ್ರದಲ್ಲಿ ಭದ್ರತಾ ಕಾರ್ಯಗಳು ಪ್ರಾರಂಭಗೊಂಡಿದ್ದು, ಪೊಲೀಸ್ ಇಲಾಖೆ ವತಿಯಿಂದ ಬಿರುಸಿನ ಚಟುವಟಿಕೆಗಳು ಕಂಡುಬಂದಿವೆ. 17 ರಂದು ಸಂಜೆ ಪವಿತ್ರ ಕಾವೇರಿ ತೀರ್ಥೋದ್ಭವ ಸಂದರ್ಭ ಭಕ್ತಾದಿಗಳಿಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾರಿಕೇಡ್ ಭಾಗಮಂಡಲ, ಅ. 6: ತಲಕಾವೇರಿ ಜಾತ್ರೆ ಸಂಬಂಧ ಕ್ಷೇತ್ರದಲ್ಲಿ ಭದ್ರತಾ ಕಾರ್ಯಗಳು ಪ್ರಾರಂಭಗೊಂಡಿದ್ದು, ಪೊಲೀಸ್ ಇಲಾಖೆ ವತಿಯಿಂದ ಬಿರುಸಿನ ಚಟುವಟಿಕೆಗಳು ಕಂಡುಬಂದಿವೆ. 17 ರಂದು ಸಂಜೆ ಪವಿತ್ರ ಕಾವೇರಿ ತೀರ್ಥೋದ್ಭವ ಸಂದರ್ಭ ಭಕ್ತಾದಿಗಳಿಗೆ ಸಮರ್ಪಕವಾದ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಬ್ಯಾರಿಕೇಡ್ ಶಾಶ್ವತ ಗೇಟ್ ನಿರ್ಮಾಣ ಕಾರ್ಯ ನಡೆಯುತ್ತಿದ್ದು, ಅತಿ ಮುಖ್ಯ ವ್ಯಕ್ತಿಗಳ ವಾಹನಗಳಿಗೆ ಮಾತ್ರ ಒಳಭಾಗಕ್ಕೆ ಪ್ರವೇಶ ಕಲ್ಪಿಸಲಾಗುವದು ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಜಾತ್ರಾ ಹಿನ್ನೆಲೆಯಲ್ಲಿ ಮಡಿಕೇರಿಯಿಂದ ತೆರಳುವ ರಸ್ತೆ ಬದಿಯ ಪೊದೆಗಳ ತೆರವುಗೊಳಿಸುವಿಕೆ, ಮಹಾದ್ವಾರಗಳಿಗೆ ಬಣ್ಣ ಬಳಿಯುವ ಕಾರ್ಯ, ಭಾಗಮಂಡಲದಿಂದ ತಲಕಾವೇರಿ ತನಕ ರಸ್ತೆಯ ಎರಡೂ ಬದಿಗಳಲ್ಲಿ ಸ್ವಚ್ಛತಾ ಕಾರ್ಯ ಭರದಿಂದ ನಡೆಯುತ್ತಿರುವ ದೃಶ್ಯ ಗೋಚರಿಸಿದೆ.