ಸೋಮವಾರಪೇಟೆ, ಅ. 6: ಅತಿವೃಷ್ಟಿಯಿಂದ ಸಾಕಷ್ಟು ಪ್ರಮಾಣದ ಕೃಷಿ, ಮನೆಗಳು ಹಾನಿಗೀಡಾಗಿದ್ದು, ಈ ಬಗ್ಗೆ ಗ್ರಾಮಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಗಮನ ಸೆಳೆಯುವ ಉದ್ದೇಶದಿಂದ ಆಗಮಿಸಿದ್ದ ಗ್ರಾಮಸ್ಥರು, ಸಭೆಯಲ್ಲಿ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳು ಗೈರಾಗಿದ್ದುದನ್ನು ಕಂಡು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಗ್ರಾಮಸಭೆಯನ್ನು ಬಹಿಷ್ಕರಿಸಿದ ಘಟನೆ ಸಮೀಪದ ತೋಳೂರುಶೆಟ್ಟಳ್ಳಿಯಲ್ಲಿ ನಡೆಯಿತು. ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಸಭೆ ಅಲ್ಲಿನ ವಿಎಸ್‍ಎಸ್‍ಬಿಎನ್ ಸಭಾಂಗಣ ದಲ್ಲಿ ಅಧ್ಯಕ್ಷೆ ವಿ.ಜೆ. ಭಾರತಿ ಅವರ ಅಧ್ಯಕ್ಷತೆಯಲ್ಲಿ ಇಂದು ಆಯೋಜಿಸ ಲಾಗಿತ್ತು. ಪೂರ್ವಾಹ್ನ 11 ಗಂಟೆಗೆ ಸಭೆಗೆ ಸಾಕಷ್ಟು ಸಾರ್ವಜನಿಕರು ಆಗಮಿಸಿದ್ದರು.

ಆದರೆ ಸಭೆಯಲ್ಲಿ ಭಾಗವಹಿಸಿ ಸಾರ್ವಜನಿಕರ ಅಹವಾಲು ಆಲಿಸಬೇಕಿದ್ದ, ಜಿ.ಪಂ. ಸದಸ್ಯ ಬಿ.ಜೆ. ದೀಪಕ್, ತಾ.ಪಂ. ಸದಸ್ಯ ಬಿ.ಎ. ಧರ್ಮಪ್ಪ ಸೇರಿದಂತೆ ಕೃಷಿ, ಸಮಾಜಕಲ್ಯಾಣ, ಆಹಾರ, ಕಂದಾಯ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಗೈರಾಗಿದ್ದರು.

ಪ್ರಮುಖ ಇಲಾಖೆಗಳ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗೈರಿಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು, ಅತೀ ಅಗತ್ಯವಾಗಿ ಬೇಕಾಗಿದ್ದ ಇಲಾಖಾಧಿಕಾರಿಗಳೇ ಸಭೆಯಲ್ಲಿ ಇಲ್ಲವೆಂದಾದರೆ ಇನ್ನು ಸಭೆ ನಡೆಸಿ ಪ್ರಯೋಜನವಾದರೂ ಏನು? ಎಂದು ಗ್ರಾಮಸ್ಥರಾದ ಕೆ.ಟಿ. ಜೋಯಪ್ಪ, ಡಿ.ಎ. ಪರಮೇಶ್, ದಿವಾಕರ್, ಶಿವಯ್ಯ ಸೇರಿದಂತೆ ಇತರರು ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಮಾಣದ ಹಾನಿ ಸಂಭವಿಸಿದೆ. ಕೃಷಿ

ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ಗೈರಿಗೆ ಅಸಮಾಧಾನ ವ್ಯಕ್ತಪಡಿಸಿದ ಸಾರ್ವಜನಿಕರು, ಅತೀ ಅಗತ್ಯವಾಗಿ ಬೇಕಾಗಿದ್ದ ಇಲಾಖಾಧಿಕಾರಿಗಳೇ ಸಭೆಯಲ್ಲಿ ಇಲ್ಲವೆಂದಾದರೆ ಇನ್ನು ಸಭೆ ನಡೆಸಿ ಪ್ರಯೋಜನವಾದರೂ ಏನು? ಎಂದು ಗ್ರಾಮಸ್ಥರಾದ ಕೆ.ಟಿ. ಜೋಯಪ್ಪ, ಡಿ.ಎ. ಪರಮೇಶ್, ದಿವಾಕರ್, ಶಿವಯ್ಯ ಸೇರಿದಂತೆ ಇತರರು ಆಕ್ರೋಶ ವ್ಯಕ್ತಪಡಿಸಿದರು.

ಅತಿವೃಷ್ಟಿಯಿಂದ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಾಕಷ್ಟು ಪ್ರಮಾಣದ ಹಾನಿ ಸಂಭವಿಸಿದೆ. ಕೃಷಿ ನಡೆಸಿ ಪ್ರಯೋಜನವಿಲ್ಲ ಎಂದು ಅಭಿಪ್ರಾಯಿಸಿದ ಸಾರ್ವಜನಿಕರು, ಗ್ರಾಮಸಭೆಯನ್ನು ಬಹಿಷ್ಕರಿಸಿ ಹೊರನಡೆದರಲ್ಲದೇ, ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳಿಗೆ ಧಿಕ್ಕಾರ ಕೂಗಿದರು.

ಸಭೆಗೆ ನೋಡಲ್ ಅಧಿಕಾರಿಯಾಗಿ ಪಶುವೈದ್ಯಕೀಯ ಇಲಾಖೆಯ ಶೈಲಜಾ ಸೇರಿದಂತೆ ಸದಸ್ಯರುಗಳು ಉಪಸ್ಥಿತರಿದ್ದರು. ಮುಂದೂಡಿದ ಗ್ರಾಮಸಭೆಯ ದಿನಾಂಕವನ್ನು ಮುಂದಿನ ದಿನಗಳಲ್ಲಿ ತಿಳಿಸಲಾಗುವದು ಎಂದು ಪಂಚಾಯಿತಿ ಪ್ರಮುಖರು ತಿಳಿಸಿದರು.