ಮಡಿಕೇರಿ, ಅ. 6: ಪಟ್ಟಣ ಪಂಚಾಯಿತಿ ಚುನಾವಣಾ ಸಂದರ್ಭ ಆಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವದು ಸಹಜ. ಆಯಾ ಪಟ್ಟಣ ಪಂಚಾಯಿತಿ ವ್ಯಾಪ್ತಿಗಳಲ್ಲಿ ಜನಪ್ರತಿನಿಧಿಗಳಾಗಲಿ, ಸಂಬಂಧಿತ ಸರಕಾರೀ ಅಧಿಕಾರಿಗಳಾಗಲೀ ಜನರಿಗೆ ಭರವಸೆಗಳನ್ನು ನೀಡುವಂತಹ ಸಭೆ ನಡೆಸುವಂತಿಲ್ಲ. ಜನರನ್ನು ಆಕರ್ಷಿಸುವ ಯೋಜನೆಗಳನ್ನು ಪ್ರಕಟಿಸುವಂತಿಲ್ಲ. ಜನಪ್ರತಿನಿಧಿಗಳು ಅಥವಾ ಅಭ್ಯರ್ಥಿಗಳು ಯಾವದೇ ಆಸೆ ಆಮಿಷಗಳನ್ನು ಒಡ್ಡುವಂತಿಲ್ಲ. ಸಭೆಗಳಲ್ಲಿ ತಮ್ಮ ನಿಲುವನ್ನು ತಿಳಿಸಬಹುದೇ ಹೊರತು ಜನರ ಬೇಕು ಬೇಡಿಕೆಗಳಿಗೆ ಸ್ಪಂದಿಸಿ ಆಶ್ವಾಸನೆ ನೀಡುವಂತಿಲ್ಲ. ಅಧಿಕಾರಿಗಳಾಗಲಿ, ಜನಪ್ರತಿನಿಧಿಗಳಾಗಲಿ ಈಗ ಪ್ರಗತಿಯಲ್ಲಿರುವ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸಭೆಗಳನ್ನು ನಡೆಸಿ ತೀರ್ಮಾನಗಳನ್ನು ಕೈಗೊಳ್ಳಬಹುದಾಗಿದೆ. ಆದರೆ, ಹೊಸದಾಗಿ ಯೋಜನೆ, ಕಾರ್ಯಕ್ರಮಗಳನ್ನು ಪ್ರಕಟಿಸುವಂತಿಲ್ಲ. ಕುಶಾಲನಗರ, ವೀರಾಜಪೇಟೆ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಿರುವದರಿಂದ ಈ ಜನಪ್ರತಿನಿಧಿಗಳಾಗಲಿ ಈಗ ಪ್ರಗತಿಯಲ್ಲಿರುವ ಯೋಜನೆ, ಕಾರ್ಯಕ್ರಮಗಳ ಅನುಷ್ಠಾನದ ಕುರಿತು ಸಭೆಗಳನ್ನು ನಡೆಸಿ ತೀರ್ಮಾನಗಳನ್ನು ಕೈಗೊಳ್ಳಬಹುದಾಗಿದೆ. ಆದರೆ, ಹೊಸದಾಗಿ ಯೋಜನೆ, ಕಾರ್ಯಕ್ರಮಗಳನ್ನು ಪ್ರಕಟಿಸುವಂತಿಲ್ಲ. ಕುಶಾಲನಗರ, ವೀರಾಜಪೇಟೆ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ಘೋಷಣೆಯಾಗಿರುವದರಿಂದ ಈ ಚುನಾವಣಾ ನೀತಿ ಸಂಹಿತೆ ಬಿಸಿ ತಟ್ಟ್ಟಿದೆ. ನೀತಿ ಸಂಹಿತೆಯನ್ವಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಿ ಸರಕಾರೀ ಪರವಾದ ಯಾವದೇ ಅಧಿಕೃತ ನೂತನ ಯೋಜನೆಗಳ ಕುರಿತು ನಿರ್ಧಾರ ಕೈಗೊಳ್ಳಲು ಅಸಾಧ್ಯ. ಕುಶಾಲನಗರ, ಸೋಮವಾರಪೇಟೆ ಹಾಗೂ ವೀರಾಜಪೇಟೆ ಪಟ್ಟಣ ಪಂಚಾಯಿತಿಗಳಿಗೆ ಮಾತ್ರ ಚುನಾವಣೆ ನಡೆಯತ್ತಿದ್ದರೂ ಜಿಲ್ಲಾಧಿಕಾರಿ ಇಡೀ ಜಿಲ್ಲೆಗೆ

(ಮೊದಲ ಪುಟದಿಂದ) ಅನ್ವಯಯವಾಗುವಂತಹ ನೂತನ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳುವಂತಿಲ್ಲ ಎಂದು ತಿಳಿದುಬಂದಿದೆ.

ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಸಭೆಯನ್ನು ಕೂಡ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಕರೆಯುವಂತಿಲ್ಲ. ಏಕೆಂದರೆ ಅವರೇ ಪ್ರಾಧಿಕಾರದ ಅಧ್ಯಕ್ಷರೂ ಆಗಿದ್ದು ಸಭೆ ನಡೆಸಿ ತೀರ್ಮಾನ ಕೈಗೊಳ್ಳುವದು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದಂತಾಗುತ್ತದೆ.

ಈ ತಿಂಗಳಾಂತ್ಯದವರೆಗೂ ನೀತಿ ಸಂಹಿತೆ ಜಾರಿಯಲ್ಲಿರುವದರಿಂದ ಜಿÀಲ್ಲೆಯಲ್ಲಿ ತುರ್ತಾಗಿ ನಡೆಯಬೇಕಾದ ನೂತನ ಅಭಿವೃದ್ಧಿ ಕಾರ್ಯಗಳಿಗೆ ತಾತ್ಕಾಲಿಕ ಧಕ್ಕೆಯಾಗುವದಂತೂ ಖಚಿತ. ಈಗಾಗಲೇ ಪ್ರಗತಿಯಲ್ಲಿರುವ ಕಾರ್ಯಗಳಿಗೆ, ಯೋಜನೆಗಳಿಗೆ ಈ ನೀತಿ ಸಂಹಿತೆ ಅನ್ವಯವಾಗುವದಿಲ್ಲ ಎಂಬದಷ್ಟೇ ಸಮಾಧಾನಕರ ಅಂಶ. -“ಚಕ್ರವರ್ತಿ”