ಗುಡ್ಡೆಹೊಸೂರು, ಅ. 6: ಇಲ್ಲಿಗೆ ಸಮೀಪದ ಬಸವನಹಳ್ಳಿಯಲ್ಲಿ ಧರ್ಮಸ್ಥಳ ಸಂಘದ ವತಿಯಿಂದ ಸಂಘದ ಮಹಿಳೆಯರಿಗೆ ಜ್ಞಾನವಿಕಾಸ ಕಾರ್ಯಕ್ರಮ ಮೇದರ ಸಮುದಾಯ ಭವನದಲ್ಲಿ ನಡೆಯಿತು. ಇದೇ ಸಂದÀರ್ಭ ಮಹಾತ್ಮಾ ಗಾಂಧೀಜಿಯವರ 150ನೇ ಜಯಂತಿಯನ್ನು ಆಚರಿಸಲಾಯಿತು. ಸಂಘದ ಸದಸ್ಯರಿಗೆ ವಿವಿಧ ಕ್ರೀಡಾ ಸ್ಪರ್ಧೆಯನ್ನು ಏರ್ಪಡಿಸಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಡ್ಡೆಹೊಸೂರು ಗ್ರಾ.ಪಂ. ಅಧ್ಯಕ್ಷ ಕೆ.ಎಸ್. ಭಾರತಿ ವಹಿಸಿಕೊಂಡಿದ್ದರು. ಈ ಸಂದÀರ್ಭ ಮಾತನಾಡಿ, ಮಹಿಳೆಯರು ಇತ್ತೀಚಿನ ದಿನಗಳಲ್ಲಿ ಸಮಾಜದಲ್ಲಿ ಪುರುಷ ಸಮಾನವಾಗಿ ದುಡಿದು ಸ್ವಾವಲಂಬಿ ಬದುಕು ಸಾಗಿಸುತ್ತಿರುವದಾಗಿ ಮೆಚ್ಚುಗೆ ವ್ಯಕ್ತಪಡಿಸಿದರು.
ವೇದಿಕೆಯಲ್ಲಿ ಜಿ.ಪಂ. ಮಾಜಿ ಸದಸ್ಯೆ ಸುಲೋಚನ, ತಾ.ಪಂ. ಸದಸ್ಯೆ ಪುಷ್ಪ ಉಪಸ್ಥಿತರಿದ್ದು, ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಗುಡ್ಡೆಹೊಸೂರು ಪಂಚಾಯಿತಿ ಪಿ.ಡಿ.ಓ. ಶ್ಯಾಂ ಈಶ್ವರಿಯ ಜ್ಞಾನವಿಕಾಸದ ಬಗ್ಗೆ ಉಪನ್ಯಾಸ ನೀಡಿದರು. ಈ ಸಂದರ್ಭ ಸಂಸ್ಥೆಯ ನೋಡೆಲ್ ಅಧಿಕಾರಿ ಪದ್ಮಾ ಸ್ವಾಗತಿಸಿದರು. ಸಂಘದ ಮೇಲ್ವೀಚಾರಕಿ ರೋಹಿಣಿ. ಕೆ ಕಾರ್ಯಕ್ರಮ ನಿರೂಪಿಸಿದರು.