ಮಡಿಕೇರಿ, ಅ. 6: ವಿದ್ಯುತ್‍ಗೆ ಸಂಬಂಧಿಸಿದಂತೆ ಯಾವದೇ ದೂರುಗಳಿದ್ದಲ್ಲಿ ಜಿಲ್ಲಾ ಗ್ರಾಹಕರ ಕುಂದು ಕೊರತೆ ನಿವಾರಣಾ ವೇದಿಕೆಗೆ ಕಳುಹಿಸಬಹುದಾಗಿದೆ. ಇದಕ್ಕೆ ಸಂಬಂಧಿಸಿದ ನಿಗದಿತ ನಮೂನೆಗಳು ವಿದ್ಯುತ್ ನಿಗಮದ ವಿಭಾಗ/ ಉಪವಿಭಾಗ ಕಚೇರಿಗಳಲ್ಲಿ ಉಚಿತವಾಗಿ ಲಭ್ಯವಿದ್ದು, ಅಗತ್ಯವಿರುವವರು ಜಿಲ್ಲಾ ಗ್ರಾಹಕರ ಕುಂದುಕೊರತೆ ನಿವಾರಣಾ ವೇದಿಕೆ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ಅಂಚೆಪೆಟ್ಟಿಗೆ ಸಂಖ್ಯೆ 23 ಮಡಿಕೇರಿ ವಿಳಾಸಕ್ಕೆ ಕಳುಹಿಸಬಹುದು ಎಂದು ಸೆಸ್ಕ್ ಮಡಿಕೇರಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.