ಮಡಿಕೇರಿ: ಪ್ರಧಾನ ಮಂತ್ರಿ ಪೋಷಣ್ ಮಾಸ ಅಭಿಯಾನದಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃಧ್ಧಿ ಯೋಜನೆ ಮಡಿಕೇರಿಗೆ ಸಂಬಂಧಿಸಿದ ಅಂಗನವಾಡಿಗಳಲ್ಲಿ ಸೆಪ್ಟಂಬರ್ ಮಾಹೆಯಲ್ಲಿ “ಮನೆಮನೆಯಲ್ಲಿ ಹಬ್ಬ ಪೋಷಣ್ ಮಾಸದ ಹಬ್ಬ” ಎಂಬ ಶೀರ್ಷಿಕೆಯಲ್ಲಿ ಯೋಜನೆಯ ಎಲ್ಲಾ ಸವಲತ್ತುಗಳು ಮಾತೃಪೂರ್ಣ, ಮಾತೃವಂದನ ಬಗ್ಗೆ ಅರಿವು ಮಾಡಿಸಲಾಯಿತು. ಜೊತೆಗೆ ಗರ್ಭೀಣಿಯರಿಗೆ ಸೀಮಂತ ಕಾರ್ಯಕ್ರಮ, ಕಿಶೋರಿಯರಿಗೆ ಹಾಗೂ ಮಕ್ಕಳಿಗೆ ಅರಿವು ಕಾರ್ಯಕ್ರಮ, ಗರ್ಭಿಣಿ, ಬಾಣಂತಿಯರಿಗೆ, ಕಿಶೋರಿಯರಿಗೆ ಆರೋಗ್ಯ ತಪಾಸಣೆ, ಚುಚ್ಚುಮದ್ದು ಕಾರ್ಯಕ್ರಮ, ಪೌಷ್ಟಿಕತಾ ಮಟ್ಟವನ್ನು ಗುರುತಿಸಿ ಅರಿವು ಮೂಡಿಸುವದು ಹಾಗೂ ಅನ್ನಪ್ರಾಸನ, ಮಕ್ಕಳನ್ನು ಕೇಂದ್ರಕ್ಕೆ ನೊಂದಣಿ ಮಾಡಿಕೊಳ್ಳುವ ಆಂದೋಲನ ನೆರೆವೇರಿತು.
ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳಾದ ಶ್ರೀಮತಿ ಮೇಪಾಡಂಡ ಸವಿತಾ ಕೀರ್ತನ್‍ರವರ ಮಾರ್ಗದರ್ಶನದಲ್ಲಿ ಆರೋಗ್ಯ ಇಲಾಖೆಯ, ಜನಪ್ರತಿನಿಧಿಗಳ ಸಹಕಾರವನ್ನು ಪಡೆದು ವೃತ್ತದ ನಾಯಕರು, ಅಂಗನವಾಡಿ ಕಾರ್ಯಕರ್ತೆಯರು, ಕಿರಿಯ ಆರೋಗ್ಯ ಮಹಿಳಾ ಕಾರ್ಯಕರ್ತೆಯರು ಕಾರ್ಯಕ್ರಮದ ಯಶಸ್ವಿಗೆ ಶ್ರಮಿಸಿ ಯೋಜನೆಯನ್ನ ಫಲಾನುಭವಿಗಳಿಗೆ ತಲಪಿಸುವಲ್ಲಿ ಯಶಸ್ವಿಯಾದರು.ಸೋಮವಾರಪೇಟೆ: ಸಮೀಪದ ಶಾಂತಳ್ಳಿ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಕಾರ್ಯಕ್ರಮ ನಡೆಯಿತು.
ಅಂಗನವಾಡಿ ಕೇಂದ್ರ ವ್ಯಾಪ್ತಿಗೆ ಒಳಪಡುವ ಗರ್ಭಿಣಿಯರಿಗೆ ಸೀಮಂತ ನೆರವೇರಿಸಿ, ಬಾಗಿನ ನೀಡಲಾಯಿತು. ಶಾಂತಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಪಲ್ಲವಿ ಅವರು ಮಾತನಾಡಿ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಮತ್ತು ಗರ್ಭಿಣಿ ಸ್ತ್ರೀಯರು ಅನುಸರಿಸಬೇಕಾದ ಕ್ರಮಗಳ ಕುರಿತು ಮಾಹಿತಿ ಒದಗಿಸಿದರು. ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಉಪಸ್ಥಿತರಿದ್ದರು.ಕೂಡಿಗೆ: ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುದುಗೂರು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಗರ್ಭಿಣಿ ಸ್ರೀಯರಿಗೆ ಪೆÇೀಷಣೆಯ ಅಭಿಯಾನ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಕೂಡಿಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಮಹಿಳೆಯರು ಸರಕಾರದಿಂದ ಸಿಗುವ ಎಲ್ಲಾ ಸವಲತ್ತುಗಳನ್ನು ಪಡೆಯಲು ಮುಂದಾಗಬೇಕು ಎಂದರು.
ಈ ಸಂದರ್ಭ ಕೂಡಿಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ 9 ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತೆಯರು ಹಾಗೂ ಕೂಡಿಗೆ, ಹಬ್ಬಾಲೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕಿಯರು ಇದ್ದರು.
ಕೂಡಿಗೆ ವ್ಯಾಪ್ತಿಯ ಗರ್ಭಿಣಿ ಸ್ರೀಯರಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಸೋಮವಾರಪೇಟೆ: ತಾಕೇರಿ ಎ ಮತ್ತು ಬಿ ಅಂಗನವಾಡಿ ಕೇಂದ್ರದಿಂದ ಕಿರಗಂದೂರು ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ ಮತ್ತು ಪೌಷ್ಟಿಕ ಆಹಾರ ಸಪ್ತಾಹ ಕಾರ್ಯಕ್ರಮ ನಡೆಸಲಾಯಿತು.
ಆರೋಗ್ಯ ಕಾರ್ಯಕರ್ತೆ ಕೆ.ಎಸ್. ಸುಶೀಲ ಮಾತನಾಡಿ, ಗರ್ಭಿಣಿ ತಾಯಿ ಆರೋಗ್ಯವಂತ ಮಗುವಿಗೆ ಜನ್ಮ ನೀಡುವಂತೆ ಮಾಡುವದೇ ಪೋಷಣ್ ಕಾರ್ಯಕ್ರಮದ ಉದ್ದೇಶ ಎಂದರಲ್ಲದೇ, ಗರ್ಭಿಣಿ ಸ್ತ್ರೀಯರು ಹಾಗೂ ಬಾಣಂತಿಯರು ಅನುಸರಿಸಬೇಕಾದ ಆಹಾರ ಪದ್ಧತಿ, ಶುಚಿತ್ವ, ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸಿದರು.