ಮಡಿಕೇರಿ, ಅ. 7: ಪ್ರಸಕ್ತ (2018-19) ಸಾಲಿನಲ್ಲಿ ಉದ್ಯೋಗಿನಿ ಯೋಜನೆಯಡಿ ಕೊಡಗು ಜಿಲ್ಲೆಗೆ 22 ಭೌತಿಕ ಗುರಿ ಅನುಷ್ಠಾನಗೊಳಿಸಲು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ವತಿಯಿಂದ ನಿಗದಿಪಡಿಸಿದ್ದು, ಅರ್ಜಿ ಆಹ್ವಾನಿಸಲಾಗಿದೆ.

ವಿವಿಧ ಬ್ಯಾಂಕುಗಳ ಮೂಲಕ ಸಾಲ ಸೌಲಭ್ಯ ಪಡೆದು ಕೃಷಿ ಹಾಗೂ ಕೃಷಿಯೇತರ ಚಟುವಟಿಕೆಗಳ (ಹಂದಿ ಸಾಕಾಣಿಕೆ, ಆಡು ಸಾಕಾಣಿಕೆ, ಕೋಳಿ ಸಾಕಾಣಿಕೆ, ನರ್ಸರಿ, ಬ್ಯೂಟಿಪಾರ್ಲರ್, ಟೈಲರಿಂಗ್, ವ್ಯಾಪಾರ ಇತ್ಯಾದಿಗಳಿಗೆ) ಮೂಲಕ ಆರ್ಥಿಕ ಸ್ವಾವಲಂಬನೆ ಸಾಧಿಸಲು 18 ರಿಂದ 55 ವರ್ಷ ವಯೋಮಿತಿಗೊಳಪಟ್ಟು ವಾರ್ಷಿಕ ಆದಾಯ ರೂ. 1.50 ಲಕ್ಷ ಅಥವಾ ಬಡತನ ರೇಖೆಯ ಒಳಪಡುವ ಪಡಿತರ ಚೀಟಿ ಹೊಂದಿದ ಮಹಿಳೆಯರಿಗೆ ಅವಕಾಶವಿರುತ್ತದೆ. (ಸಂತ್ರಸ್ತ ಮಹಿಳೆಯರಿಗೆ ಪ್ರಥಮ ಆದ್ಯತೆ ನೀಡಲಾಗುವದು).

ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪ ನಿರ್ದೇಶಕರ ಕಚೇರಿ ಹಾಗೂ ಜಿಲ್ಲೆಯ 3 ತಾಲೂಕುಗಳ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗಳಲ್ಲಿ ಉದ್ಯೋಗಿನಿ ಯೋಜನೆಯ ಅರ್ಜಿಗಳು ಲಭ್ಯವಿದ್ದು ಅರ್ಹ ಮಹಿಳೆಯರು ಈ ಕಚೇರಿಗಳಿಂದ ಅರ್ಜಿ ಪಡೆದು ಸೂಕ್ತ ದಾಖಲೆಗಳೊಂದಿಗೆ ತಾ. 10 ರೊಳಗೆ ಸಲ್ಲಿಸಬಹುದು. ಜಿಲ್ಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಹಿಳೆಯರು ಆದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಆಸಕ್ತಿ ಇರುವ ಮಹಿಳೆಯರು ಜಿಲ್ಲಾ ಕಚೇರಿ, ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಉಪ ನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್, ಮೈಸೂರು ರಸ್ತೆ, ಮಡಿಕೇರಿ ದೂ. 08272-298379, 7996368687, ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ರೇಸ್ ಕೋರ್ಸ್ ರಸ್ತೆ, ಹೊಸ ಬಡಾವಣೆ, ಮಡಿಕೇರಿ ದೂ. 08272-228197, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, ತಾಲೂಕು ಸ್ತ್ರೀಶಕ್ತಿ ಭವನ, ತಾಲೂಕು ಪಂಚಾಯಿತಿ ಆವರಣ, ಸೋಮವಾರಪೇಟೆ ದೂ. 08276-282281 ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಖಾರಿಗಳ ಕಚೇರಿ, ಜಿಲ್ಲಾ ಸ್ತ್ರೀಶಕ್ತಿ ಮಾರುಕಟ್ಟೆ ಸಂಕೀರ್ಣ ಕಟ್ಟಡ, ಉಪ ನೋಂದಾವಣಾಧಿಕಾರಿಗಳ ಕಚೇರಿ ಎದುರು ಪೊನ್ನಂಪೇಟೆ ದೂ. 08274-249010 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು. 18 ರಿಂದ 55 ವರ್ಷದೊಳಗಿನ ಮಹಿಳೆಯರಿಗೆ ಆದ್ಯತೆ ನೀಡಲಾಗುವದು. ಪರಿಶಿಷ್ಟ ಜಾತಿ, ಪಂಗಡದ ಮಹಿಳೆಯರಿಗೆ ಘಟಕ ವೆಚ್ಚ ರೂ. 3 ಲಕ್ಷ ಹಾಗೂ ಶೇ. 50 ಸಹಾಯಧನ ನೀಡಲಾಗುವದು ಮತ್ತು ಕುಟುಂಬದ ವಾರ್ಷಿಕ ಆದಾಯ ರೂ. 2 ಲಕ್ಷಕ್ಕೆ ಮೀರಬಾರದು. ವಿಧವೆಯರು, ವಿಕಲಚೇತನರು, ಸಂಕಷ್ಟ ಮಹಿಳೆ, ಅಲ್ಪಸಂಖ್ಯಾತರು ಮತ್ತು ಇತರ ವರ್ಗದವರಿಗೆ ಘಟಕ ವೆಚ್ಚ ರೂ. 3 ಲಕ್ಷ ಹಾಗೂ ಶೇ. 30 ಸಹಾಯಧನ ನೀಡಲಾಗುವದು ಮತ್ತು ಕುಟುಂಬದ ವಾರ್ಷಿಕ ರೂ. 1,50,000 ಕ್ಕೆ ಮೀರಬಾರದು ಎಂದು ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.