ವೀರಾಜಪೇಟೆ, ಅ. 7: ಪ್ರತಿ ವಷದಂತೆ ಈ ವರ್ಷವು ವೀರಾಜಪೇಟೆ ಒಕ್ಕಲಿಗರ ಯುವ ವೇದಿಕೆಯು ತಮ್ಮ ಸಮುದಾಯದ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ತೀರ್ಮಾನಿಸಿದೆ. ವೀರಾಜಪೇಟೆ ತಾಲೂಕಿನ ಒಕ್ಕಲಿಗ ಸಮುದಾಯದ ವಿದ್ಯಾರ್ಥಿಗಳು ತಮ್ಮ ಅಂಕ ಪಟ್ಟಿಯೊಂದಿಗೆ ತಾ. 15 ರೊಳಗೆ ಅರ್ಜಿ ಸಲ್ಲಿಸಬಹುದು ಎಂದು ಒಕ್ಕಲಿಗರ ಯುವ ವೇದಿಕೆಯ ಪ್ರಧಾನ ಕಾರ್ಯದರ್ಶಿ ಲೋಹಿತ್ ಗೌಡ ತಿಳಿಸಿದ್ದಾರೆ.
ಹಾತೂರಿನ ಕಚೇರಿಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಲೋಹಿತ್ ಗೌಡ ತಾಲೂಕಿನ ನಮ್ಮ ಸಮುದಾಯದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಎಸ್.ಎಸ್.ಎಲ್.ಸಿ.ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರವನ್ನು ಪ್ರತಿವರ್ಷ ನೀಡಲು ತೀರ್ಮಾನಿಸಿದ್ದು, 2017-18ನೇ ಸಾಲಿನಲ್ಲಿ ಎಸ್.ಎಸ್.ಎಲ್.ಸಿ.ಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳು ಕೊನೆಯ ದಿನಾಂಕ ತಾ. 15 ರೊಳಗೆ ಯುವ ವೇದಿಕೆಯ ಕಚೇರಿ ಅಥವಾ ನಿರ್ದೇಶಕರಿಗೆ ಅರ್ಜಿ ಸಲ್ಲಿಸುವಂತೆ ತಿಳಿಸಿದರು. ಯುವ ವೇದಿಕೆಯ ಅಧ್ಯಕ್ಷ ಮಹೇಶ್ ಮಾತನಾಡಿ, ತಾ. 21 ರಂದು ನಡೆಯುವ ವಾರ್ಷಿಕ ಮಹಾಸಭೆಯಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ದಾನಿಗಳಾದ ಕಾಕೋಟುಪರಂಬುವಿನ ನಿವೃತ್ತ ಗ್ರಾಮಲೆಕ್ಕಿಗ ಗೋಪಾಲಕೃಷ್ಣ ತಮ್ಮ ತಾಯಿ ಹೆಸರಿನಲ್ಲಿ ಸ್ಥಾಪಿಸಿರುವ ವಿದ್ಯಾರ್ಥಿ ನಿಧಿಯಡಿಯಲ್ಲಿ ಸನ್ಮಾನಿಸಲಿದ್ದಾರೆ ಎಂದು ತಿಳಿಸಿದರು. ಹೆಚ್ಚಿನ ಮಾಹಿತಿಗಾಗಿ ಮಂಜುನಾಥ್ (8453400006) ಸಂರ್ಕಿಸಬಹುದಾಗಿದೆ.