*ಗೋಣಿಕೊಪ್ಪ : ಗಾಂಧಿ ಜಯಂತಿ ಪ್ರಯುಕ್ತ ಕಾವೇರಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನ ಘಟಕ, ಸೌತ್ ಕೂರ್ಗ್ ಪಾರ್ಮರ್ಸ್ ಅಸೋಸಿಯೇಷನ್, ವಾಹನ ಚಾಲಕರ ಮಾಲೀಕರ ಸಂಘ ಹಾಗೂ ಆಟೋ ಚಾಲಕರ ಸಂಘ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಕಾರ್ಯಕ್ರಮವನ್ನು ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಉದ್ಘಾಟಿಸಿದರು.

ಮಕ್ಕಂದೂರು

ಮಕ್ಕಂದೂರು ಗ್ರಾಮದಲ್ಲಿ ಮಕ್ಕಂದೂರು ಪ್ರೌಢಶಾಲೆಯ ವಿದ್ಯಾರ್ಥಿಗಳು ಸ್ವಚ್ಛತಾ ಕಾರ್ಯ ನಡೆಸುವ ಮೂಲಕ ಗ್ರಾಮಸ್ಥರಲ್ಲಿ ಸ್ವಚ್ಛತೆಯ ಅರಿವು ಮೂಡಿಸಿದರು. ಕಸ ಕಡ್ಡಿ, ಗಿಡ, ಗಂಟಿಗಳು, ಪ್ಲಾಸ್ಟಿಕ್ ತ್ಯಾಜ್ಯಗಳನ್ನು ತೆರವುಗೊಳಿಸಿ ಸ್ವಚ್ಛ ಗ್ರಾಮ, ಸ್ವಚ್ಛ ಪರಿಸರವೆಂದು ಘೋಷಣೆ ಕೂಗಿದರು.

ಮಕ್ಕಂದೂರು ಹೋಂಸ್ಟೇ ಅಸೋಸಿಯೇಷನ್ ವತಿಯಿಂದ ನಡೆದ ಸ್ವಚ್ಛತಾ ಅಭಿಯಾನವನ್ನು ಅಸೋಷಿಯೇಷನ್ ಅಧ್ಯಕ್ಷ ವಿಕಾಸ್ ಅಚ್ಚಯ್ಯ ಉದ್ಘಾಟಿಸಿದರು. ಉಪಾಧ್ಯಕ್ಷÀ ಮನು ಮುದ್ದಪ್ಪ, ಪ್ರಮುಖರಾದ ಮನು ಉತ್ತಪ್ಪ, ಅಯ್ಯಪ್ಪ, ಡ್ಯಾನಿಯಲ್, ರಾಜ, ನಯನಾ ಚಂಗಪ್ಪ, ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಇದೇ ಸಂದರ್ಭ ವಿದ್ಯಾರ್ಥಿಗಳಿಗೆ ಅಸೋಸಿಯೇಷನ್ ವತಿಯಿಂದ ಅಗತ್ಯ ಪರಿಕರಗಳನ್ನು ವಿತರಿಸಲಾಯಿತು.

ಕಿರಿಕೊಡ್ಲಿ

ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿಯ ಕಿರಿಕೊಡ್ಲಿಮಠದ ವಿದ್ಯಾಸಂಸ್ಥೆಯಲ್ಲಿ ಗಾಂಧಿ ಜಯಂತಿ ಸಮಾರಂಭವನ್ನು ಆಚರಿಸಲಾಯಿತು.

ಅಧ್ಯಕ್ಷತೆ ವಹಿಸಿದ್ದ ಮಠಾಧೀಶ ಸದಾಶಿವ ಸ್ವಾಮೀಜಿ ಅವರ ಸಾನಿಧ್ಯದಲ್ಲಿ ಬೆಂಗಳೂರಿನ ಸ್ತ್ರೀರೋಗ ತಜ್ಞೆ ಡಾ. ಲಹರಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಮಹಾತ್ಮ ಗಾಂಧೀಜಿಯವರ ತತ್ವಾದರ್ಶಗಳನ್ನು ಪಾಲಿಸುತ್ತಿರುವ ಸ್ವಾಮೀಜಿಯವರಂತೆಯೇ ವಿದ್ಯಾರ್ಥಿಗಳು ಸಹ ಅಚಲ ಶ್ರದ್ಧೆ, ದೃಢನಿರ್ಧಾರ, ಪ್ರಾಮಾಣಿಕತೆಯನ್ನು ರೂಢಿಸಿಕೊಳ್ಳುವಂತೆ ಅವರು ಕರೆ ನೀಡಿದರು.

ವಿದ್ಯಾರ್ಥಿಗಳು ಸಾಂಸ್ಕøತಿಕ ಕಾರ್ಯಕ್ರಮ ಪ್ರದರ್ಶಿಸಿ ರಂಜಿಸಿದರು. ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಅಧಿಕ ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಡಾ. ಲಹರಿ ಪ್ರೋತ್ಸಾಹಧನ ನೀಡಿ ಸನ್ಮಾನಿಸಿದರು.

ಮುಖ್ಯ ಅತಿಥಿಗಳಾಗಿ ಬಿ.ಎನ್. ಸರಳಾಕ್ಷಿ ಕಾರ್ಯದರ್ಶಿ ಕೆ.ಪಿ. ನಂಜುಂಡಯ್ಯ ಪ್ರಾಂಶುಪಾಲರಾದ ಕೆ.ಎಸ್. ತನುಜಾ, ಶಿಕ್ಷಕರಾದ ರೇಣುಕಾ, ಸುದೀನ್ ಮುಂತಾದವರು ಉಪಸ್ಥಿತರಿದ್ದರು.