ನಾಪೆÇೀಕ್ಲು, ಆ. 7: ದೇಶಕ್ಕೆ ಆಪತ್ತು ಬರುವ ಪರಿಸ್ಥಿತಿ ಬಂದಾಗ ಎನ್.ಎಸ್.ಎಸ್. ವಿದ್ಯಾರ್ಥಿಗಳು ದೇಶ ರಕ್ಷಣೆಗೂ ಸಿದ್ಧರಿರಬೇಕು ಎಂದು ನಾಪೆÇೀಕ್ಲು ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ಯಾಮಲಾ ಜಿ.ವಿ ಅಭಿಪ್ರಾಯಪಟ್ಟರು.

ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸ ಲಾಗಿದ್ದ ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್ ಘಟಕ ಮತ್ತು ಪ್ರಕೃತಿ ಇಕೋ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್, ಇಕೋ ಕ್ಲಬ್‍ಗಳಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ. ನಾಪೆÇೀಕ್ಲು, ಆ. 7: ದೇಶಕ್ಕೆ ಆಪತ್ತು ಬರುವ ಪರಿಸ್ಥಿತಿ ಬಂದಾಗ ಎನ್.ಎಸ್.ಎಸ್. ವಿದ್ಯಾರ್ಥಿಗಳು ದೇಶ ರಕ್ಷಣೆಗೂ ಸಿದ್ಧರಿರಬೇಕು ಎಂದು ನಾಪೆÇೀಕ್ಲು ಸರಕಾರಿ ಪ್ರಥಮ ದರ್ಜೆ ಪದವಿ ಕಾಲೇಜಿನ ರಾಜ್ಯ ಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ಯಾಮಲಾ ಜಿ.ವಿ ಅಭಿಪ್ರಾಯಪಟ್ಟರು.

ಸ್ಥಳೀಯ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸ ಲಾಗಿದ್ದ ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್ ಘಟಕ ಮತ್ತು ಪ್ರಕೃತಿ ಇಕೋ ಕ್ಲಬ್ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ವಿದ್ಯಾರ್ಥಿ ಸಂಘ, ಎನ್‍ಎಸ್‍ಎಸ್, ಇಕೋ ಕ್ಲಬ್‍ಗಳಿಂದ ವಿದ್ಯಾರ್ಥಿಗಳು ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯವಿದೆ. ಅಭಿವೃದ್ಧಿ ಸಮಿತಿ ಸದಸ್ಯ ಎನ್.ಎಸ್. ಉದಯಶಂಕರ್ ಇಂದಿನ ದಿನಗಳಲ್ಲಿ ಮಕ್ಕಳಲ್ಲಿ ನೈತಿಕ ಶಿಕ್ಷಣದ ಕೊರತೆ ಕಂಡುಬರುತ್ತಿದೆ. ಆದುದರಿಂದ ನೈತಿಕ ಶಿಕ್ಷಣ ನೀಡಲು ಶಿಕ್ಷಕರು, ಪೆÇೀಷಕರು ಯತ್ನಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಪಕೃತಿ ಇಕೋ ಕ್ಲಬ್ ಉದ್ಘಾಟಿಸಿದ ಪ್ರೌಢಶಾಲಾ ವಿಭಾಗದ ದೈಹಿಕ ಶಿಕ್ಷಕಿ ಕಸ್ತೂರಿ, ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕರವಂಡ ಲವ ನಾಣಯ್ಯ ಮಾತನಾಡಿದರು.

ವೇದಿಕೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯರು ಹಾಜರಿದ್ದರು.

ವಿದ್ಯಾರ್ಥಿನಿಯರಿಂದ ಪ್ರಾರ್ಥನೆ, ಪ್ರಬಾರ ಪ್ರಾಂಶುಪಾಲೆ ಶ್ರೀಲತಾ ಸ್ವಾಗತ, ಉಪನ್ಯಾಸಕಿ ಅವನಿಜಾ ನಿರೂಪಿಸಿ, ಉಪನ್ಯಾಸಕ ಸುರೇಂದ್ರ ವಂದಿಸಿದರು.