ಸುಂಟಿಕೊಪ್ಪ ಪ್ರೌಢಶಾಲೆ

ಸರಕಾರಿ ಪ್ರೌಢಶಾಲೆಯಲ್ಲಿ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹೂದ್ದೂರ್ ಶಾಸ್ತ್ರೀಜಿ ಜನ್ಮ ದಿನಾಚರಣೆಯ ಅಂಗವಾಗಿ ಶಾಲಾವರಣದಲ್ಲಿ ಸ್ವಚ್ಛತಾ ಕಾರ್ಯಕ್ಕೆ ಗ್ರಾ.ಪಂ. ಚಾಲನೆ ನೀಡಿದರು.

ಸರಕಾರಿ ಪ್ರೌಢ ಶಾಲಾವರಣದಲ್ಲಿ ಆಯೋಜಿಸಲಾದ ಕಾರ್ಯಕ್ರಮಕ್ಕೆ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹೂದ್ದೂರ್ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸುವ ಮೂಲಕ ಗ್ರಾ.ಪಂ. ಅಧ್ಯಕ್ಷೆ ರೋಸ್ ಮೇರಿ ರಾಡ್ರಿಗಸ್ ಚಾಲನೆ ನೀಡಿದರು.

ಕೊಡಗು ಜಿಲ್ಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಿ.ಟಿ. ಸೋಮಶೇಖರ್ ಅವರು ಮಾತನಾಡಿ, ಗಾಂಧೀಜಿ, ಲಾಲ್ ಬಹದ್ದೂರ್ ಶಾಸ್ತ್ರೀ ಸರಳ ಜೀವ ನÀಡೆಸಿದರು ಹಾಗೂ ಗಾಂಧೀಜಿಯವರು ಸತ್ಯ ಮತ್ತು ಅಹಿಂಸಾ ಚಳವಳಿಯ ಮೂಲಕ ಮಹಾತ್ಮರಾಗಿದ್ದಾರೆ ಎಂದರು.

ಶಾಲಾ ಶಿಕ್ಷಕ ಟಿ.ಜಿ. ಪ್ರೇಮ್‍ಕುಮಾರ್ ಮಾತನಾಡಿ, ಪ್ರತಿಯೊಬ್ಬರು ಮನೆಯ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛಗೊಳಿಸುವ ಕಾರ್ಯಕ್ಕೆ ತೊಡಗಿಸಿಕೊಂಡಲ್ಲಿ ಮಾತ್ರ ರಾಷ್ಟ್ರವು ಸ್ವಚ್ಛಗೊಳ್ಳಲು ಸಾಧ್ಯವಾಗಲಿದೆ ಎಂದು ಹೇಳಿದರು. ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹೂದ್ದೂರ್ ಶಾಸ್ತ್ರೀಜಿ ಜನ್ಮದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳು ಸರ್ವಧರ್ಮ ಪ್ರಾರ್ಥನೆಯನ್ನು ನಡೆಸಿದರು. ಶಾಲಾ ವಿದ್ಯಾರ್ಥಿಗಳು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸ್ವಸಹಾಯ ಸಂಘದ ಸದಸ್ಯರು ಸ್ವಚ್ಛತಾ ಕಾರ್ಯವನ್ನು ನಡೆಸಿದರು.

ಈ ಸಂದರ್ಭ ಗ್ರಾ.ಪಂ. ಸದಸ್ಯರುಗಳಾದ ಕೆ.ಇ. ಕರೀಂ, ಎ. ಶ್ರೀಧರ್ ಕುಮಾರ್, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೇದಪ್ಪ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮೇಲ್ವಿಚಾರಕಿ ಕನಕಮಣಿ, ಕಾರ್ಯದರ್ಶಿ ಶ್ರೀಧರ್, ಸಿಬ್ಬಂದಿ ಪುನೀತ್ ಕುಮಾರ್ ಮತ್ತಿತರರು ಇದ್ದರು.

ವಿದ್ಯಾರ್ಥಿನಿ ಸುರಾಮುನ್ನಿಸಾ ಸ್ವಾಗತಿಸಿ, ಅಕ್ಷಿತಾ ಕಾರ್ಯಕ್ರಮ ನಿರ್ವಹಿಸಿ, ರಕ್ಷಿತಾ ವಂದಿಸಿದರು.

ಪೆರಾಜೆ

ಕರಿಕೆ-ಪೆರಾಜೆ: ಸ್ವಚ್ಛ ಪರಿಸರ ಗಾಂಧೀಜಿಯವರ ಮೂಲಮಂತ್ರವಾಗಿದ್ದು, ಇದರ ಧ್ಯೋತಕವಾಗಿ ನಮ್ಮ ದೇಶದ ಪ್ರಧಾನಿ ಮೋದಿಜೀಯವರು ಸ್ವಚ್ಛ ಭಾರತ್ ಅಭಿಯಾನವನ್ನು ಪ್ರಾರಂಭಿಸಿದ್ದು,ಇದನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಪೆರಾಜೆಯ ಚಿಗುರು ಯುವಕಮಂಡಲದ ಸದಸ್ಯರು ಸ್ವಚ್ಛತಾ ಕಾರ್ಯವನ್ನು ಕೈಗೊಂಡರು.

ಪೆರಾಜೆ ಗ್ರಾಮ ಪಂಚಾಯಿತಿಗೆ ಸಂಬಂಧಿಸಿದಂತೆ ಗಡಿಗುಡ್ಡೆಯಿಂದ ಪೆರಾಜೆ ಜಂಕ್ಷನ್‍ವರೆಗಿನ ರಸ್ತೆಯ ಎರಡೂ ಬದಿಗಳಲ್ಲಿ ಬಿದ್ದಿದ್ದ ಪರಿಸರಕ್ಕೆ ಮಾರಕವಾಗಿರುವ ಪ್ಲಾಸ್ಟಿಕ್ ತ್ಯಾಜ್ಯಗಳು ಮತ್ತು ಇತರ ಕಸ ಕಡ್ಡಿಗಳನ್ನು ಹೆಕ್ಕಿ ಶುಚಿಗೊಳಿಸಿದರು. ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದ ಯುವಕ ಮಂಡಲದ ಸದಸ್ಯರಿಗೆ ಮಡಿಕೇರಿ ತಾಲೂಕು ಪಂಚಾಯಿತಿ ಸದಸ್ಯ ನಾಗೇಶ್ ಕುಂದಲ್ಪಾಡಿ, ಪೆರಾಜೆ ಗ್ರಾಮ ಪಂಚಾಯಿತಿ ಸದಸ್ಯ ಚಿನ್ನಪ್ಪ ಅಡ್ಕ, ಪ್ರ.ಕೃ.ಪ. ಸದಸ್ಯ ಪ್ರಸನ್ನ ನೆಕ್ಕಿಲ, ನೈತಿಕ ಬೆಂಬಲ ನೀಡಿದರು.

ಈ ಸಂದರ್ಭ ಚಿಗುರು ಯುವಕ ಮಂಡಲದ ಅಧ್ಯಕ್ಷ ಶೀತಲ್ ಕುಂಬಳಚೇರಿ, ಕಾರ್ಯದರ್ಶಿ ನಿಶಾಂತ್ ಮಜಿಕೋಡಿ, ಖಜಾಂಚಿ ಹರ್ಷಿತ್ ಮಜಿಕೋಡಿ, ಗ್ರಾಮ ಪಂಚಾಯಿತಿ ಸದಸ್ಯ ಉದಯಚಂದ್ರ ಕುಂಬಳಚೇರಿ ಅಲ್ಲದೆ ಹೆಚ್ಚಿನ ಸಂಖ್ಯೆಯಲ್ಲಿ ಸದಸ್ಯರುಗಳು ಗ್ರಾಮಸ್ಥರು ಕೈ ಜೋಡಿಸಿದ್ದÀರು.

ಸಂಗ್ರಹಿಸಿದ ಕಸವನ್ನು ಸಾಗಿಸಲು ಪೆರಾಜೆ ಪಿಕ್‍ಆಫ್ ಮಾಲೀಕ ವಿಜಯ (ಪಿ.ಎಸ್.ವಿ) ವಾಹನ ನೀಡಿ ಸಹಕರಿಸಿದರು.

ಸೇವ್‍ಲೈಫ್ ಫೌಂಡೇಶನ್ ಸುಂಟಿಕೊಪ್ಪ

ಸ್ಥಳೀಯ ಸೇವ್ ಲೈಪ್ಸ್ ಫೌಂಡೇಶನ್ ವತಿಯಿಂದ ಸ್ವಚ್ಛತಾ ಅಭಿಯಾನಕ್ಕೆ ಕೊಡಗರಹಳ್ಳಿ ಸುಂಟಿಕೊಪ್ಪ ನಾಡು ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಅವರು ಚಾಲನೆ ನೀಡಿದರು.

7ನೇ ಹೊಸಕೋಟೆಯ ಸೇವ್ ಲೈಪ್ಸ್ ಫೌಂಡೇಶನ್ ವತಿಯಿಂದ ಆಯೋಜಿಸಲಾಗಿದ್ದ ಸ್ವಚ್ಛತಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ನಿವೃತ್ತ ಮುಖ್ಯೋಪಾಧ್ಯಾಯಿನಿ ಸಾವಿತ್ರಿ ಮಾತನಾಡಿ, ನಾವು ನಮ್ಮ ಮನೆಯನ್ನು ಯಾವ ರೀತಿಯಲ್ಲಿ ಸ್ವಚ್ಛತೆಯನ್ನು ಕಾಯ್ದುಕೊಳ್ಳುತ್ತೇವೆಯೋ ಅದೇ ರೀತಿಯಲ್ಲಿ ನಮ್ಮ ಗ್ರಾಮದ ಸುತ್ತ ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಲು ಪಣತೊಡಬೇಕೆಂದರು.

ವಿಎಸ್‍ಎಸ್‍ಎನ್ ಬ್ಯಾಂಕ್ ಅಧ್ಯಕ್ಷ ಎನ್.ಸಿ. ಪೊನ್ನಪ್ಪ ಮಾತನಾಡಿ, ತ್ಯಾಜ್ಯಗಳನ್ನು ಎಲ್ಲೆಂದರಲ್ಲಿ ಎಸೆಯದೆ ಒಂದೇ ಸ್ಥಳದಲ್ಲಿ ಹಾಕುವದರಿಂದ ಅದನ್ನು ವಿಲೇವಾರಿಗೊಳಿಸಲು ಸಹಕಾರಿಯಾಗಲಿದೆ ಅಲ್ಲದೆ ಗ್ರಾಮದಲ್ಲಿ ಸದಾ ಸ್ವಚ್ಛತೆಯು ಕಂಡು ಬರಲಿದೆ ಎಂದರು.

ಸಂಸ್ಥೆಯ ಅಧ್ಯಕ್ಷ ವಿಕ್ರಂ ಮಾತನಾಡಿ, ಸಾಂಕ್ರಾಮಿಕ ಕಾಯಿಲೆಗಳಾದ ಮಲೇರಿಯಾ, ಡೆಂಗಿ ಹಾಗೂ ಕಾಲರ ರೋಗಗಳನ್ನು ತಡೆಗಟ್ಟ ಬೇಕಾದರೆ ಮೊದಲು ನಮ್ಮ ಮನೆಯ ಮುಂಭಾಗದ ಪರಿಸರವನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವದರೊಂದಿಗೆ ಸುತ್ತ ಮುತ್ತಲಿನ ಪರಿಸದಲ್ಲಿರುವ ತ್ಯಾಜ್ಯಗಳನ್ನು ಸ್ವಚ್ಛ ಗೊಳಿಸುವ ನಮಗೆ ಮುಂದೆ ಎದುರಾಗಬಹುದಾದ ಸಾಂಕ್ರಾಮಿಕ ಕಾಯಿಲೆಗಳಿಂದ ಪಾರಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

7ನೇ ಹೊಸಕೋಟೆ ಗ್ರಾಮ ಪಂಚಾಯಿತಿಯವರು, ಬ್ಲಡ್‍ಬೈಯ ಎಂದೇ ಖ್ಯಾತಿ ಪಡೆದಿರುವ ಮಡಿಕೇರಿಯ ಹಿದಾಯಿತುಲ್ಲಾ, ಕುಶಾಲನಗರ ಗ್ರಾಮೀಣ ಒಕ್ಕೂಟ (ಮೈಕ್ರೊ ಫೈನಾನ್ಸ್) ಸಂಸ್ಥೆಯ, ನೂರುಲ್ಲಾ ಜುಮಾ ಮಸೀದಿಯ ರಜಾಕ್ ಮತ್ತು ಸಂಗಡಿಗರು, ಪದಾಧಿಕಾರಿಗಳು ಸಂಸ್ಥೆಯ ಪದಾಧಿಕಾರಿಗಳು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ಥಳೀಯ ಗ್ರಾಮಸ್ಥರು ರಾಷ್ಟ್ರೀಯ ಹೆದ್ದಾರಿಯ 2 ಬದಿಯಲ್ಲಿ ಬಿದ್ದಿದ್ದ ಕಸ ಕಡ್ಡಿ, ಪ್ಲಾಸ್ಟಿಕ್ ಬಾಟಲಿ, ಇನ್ನಿತರ ತ್ಯಾಜ್ಯ ವಸ್ತುಗಳನ್ನು ವಾಹನಗಳಲ್ಲಿ ತುಂಬಿಸುವ ಮೂಲಕ ಸ್ವಚ್ಛತಾ ಕಾರ್ಯವನ್ನು ನಡೆಸಿದರು.

ಸೇವ್ ಲೈಪ್ಸ್ ಫೌಂಡೇಶನ್ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಆಡಳಿತ ಮಂಡಳಿಯವರು ಕಸವನ್ನು ಸರಿಯಾದ ರೀತಿಯಲ್ಲಿ ವಿಲೇವಾರಿಗೊಳಿಸಲು ತಕ್ಕ ವ್ಯವಸ್ಥೆಯನ್ನು ಒದಗಿಸುವಂತೆ ಮನವಿ ಮಾಡಿಕೊಂಡರು.

ಈ ಸಂದರ್ಭ ಸೇವ್ ಲೈಪ್ಸ್ ಫೌಂಡೇಶನ್ ಉಪಾಧ್ಯಕ್ಷ ಸುಗು, ಕಾರ್ಯದರ್ಶಿ ರವಿಚಂದ್ರ, ಸಹ ಕಾರ್ಯದರ್ಶಿ ಜಿಷ್ಣು, ಉಷಾ, ಸತೀಶ್, ಮುರುಗೇಶ್ ಜಗದೀಶ್ ಮತ್ತಿತರರು ಇದ್ದರು.

ಗುಡ್ಡೆಹೊಸೂರು

ಇಲ್ಲಿನ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಜಯಂತಿಯ ಅಂಗವಾಗಿ ಅಲ್ಲಿನ ಶಾಲಾ ಆವರಣವನ್ನು ಸ್ವಚ್ಛಗೊಳಿಸಲಾಯಿತು. ಈ ಸಂದರ್ಭ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಎಸ್.ಡಿ.ಎಂ.ಸಿ ಅಧ್ಯಕ್ಷ ಬಿ.ಎಸ್. ದಿನೇಶ್, ಧನಪಾಲ್, ಪಾಪಣ್ಣಿ ಮುಂತಾದವರು ಭಾಗವಹಿಸಿದ್ದರು.ಗೋಣಿಕೊಪ್ಪಲು

*ಗೋಣಿಕೊಪ್ಪ : ಗಾಂಧಿ ಜಯಂತಿ ಪ್ರಯುಕ್ತ ಕಾವೇರಿ ಪದವಿ ಕಾಲೇಜು ರಾಷ್ಟ್ರೀಯ ಸೇವಾ ಯೋಜನ ಘಟಕ, ಸೌತ್ ಕೂರ್ಗ್ ಪಾರ್ಮರ್ಸ್ ಅಸೋಸಿಯೇಷನ್, ವಾಹನ ಚಾಲಕರ ಮಾಲೀಕರ ಸಂಘ ಹಾಗೂ ಆಟೋ ಚಾಲಕರ ಸಂಘ ವತಿಯಿಂದ ಸ್ವಚ್ಛತಾ ಕಾರ್ಯ ನಡೆಯಿತು. ಕಾರ್ಯಕ್ರಮವನ್ನು ಜಿ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಸಿ.ಕೆ. ಬೋಪಣ್ಣ ಉದ್ಘಾಟಿಸಿದರು.