ಕೂಡಿಗೆ, ಅ. 7: ಮುಳ್ಳುಸೋಗೆ ಗ್ರಾಮ ಪಂಚಾಯಿತಿ ವತಿಯಿಂದ ಶೇ.2 ರಷ್ಟು ಅನುದಾನದಲ್ಲಿ ಮುಳ್ಳುಸೋಗೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಕ್ರೀಡಾ ಸಾಮಗ್ರಿಗಳನ್ನು ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭವ್ಯ ವಿತರಿಸಿದರು.
ನಂತರ ಮಾತನಾಡಿದ ಅವರು, ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಗ್ರಾಮ ಪಂಚಾಯಿತಿಯ ವಿವಿಧ ಯೋಜನೆಗಳ ಅಡಿಯಲ್ಲಿ ಶೇ. 2ರ ಅನುದಾನದಲ್ಲಿ ವಿದ್ಯಾರ್ಥಿಗಳು ಕ್ರೀಡೆಯಲ್ಲಿ ಭಾಗವಹಿಸಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕ್ರೀಡಾ ಸಾಮಗ್ರಿಗಳನ್ನು ವಿತರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮದಲ್ಲಿ ಉಪಾಧ್ಯಕ್ಷ ತಾರಾನಾಥ್, ಸದಸ್ಯರಾದ ಸಂತೋಷ್, ಸುಚಿತ್ರ, ರಾಧ, ಜ್ಯೋತಿ, ವೇದಾವತಿ, ರುದ್ರಾಂಬೆ, ಸುಭೇದಾ, ಜಯಲಕ್ಷ್ಮಿ, ಕಮಲ, ರುಕ್ಯಾ, ಗ್ರಾಮ ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ರಾಜಶೇಖರ್, ಶಾಲಾ ಮುಖ್ಯ ಶಿಕ್ಷಕಿ ಯಮುನಾ, ಸಹ ಶಿಕ್ಷಕರಾದ ರಾಗಿಣಿ, ಸರೋಜ, ಜ್ಯೋತಿ ಮೊದಲಾದವರು ಇದ್ದರು.