ಒಡೆಯನಪುರ, ಅ. 8: 2018-19ನೇ ಸಾಲಿನ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಗೌಡಳ್ಳಿ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿನಿಯರು ಬಾಲಕಿಯರ ವಿಭಾಗದ ಫುಟ್ಬಾಲ್ ಪಂದ್ಯಾವಳಿಯಲ್ಲಿ ದ್ವಿತೀಯ ಸ್ಥಾನ ಪಡೆದು ವಿಭಾಗ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಗೊಂಡಿದ್ದಾರೆ.
ಬಾಲಕಿಯರಾದ ಸಿ.ಜಿ. ನಿಖಿತ, ಜಾನೇಟ್ ಲೋಬೋ, ಸಿ.ಆರ್. ಅಂಜಲಿ, ಬಿ.ಆರ್. ಅಂಕಿತ ಇವರುಗಳು ಈ ಸಾಧನೆ ಮಾಡಿದ್ದಾರೆ ಎಂದು ಶಾಲೆಯ ಮುಖ್ಯ ಶಿಕ್ಷಕ ಎನ್.ಕೆ. ನಾಗೇಂದ್ರ ಮತ್ತು ದೈಹಿಕ ಶಿಕ್ಷಣ ಶಿಕ್ಷಕ ಜಿ.ಇ. ಪ್ರವೀಣ್ಕುಮಾರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಇತ್ತೀಚೆಗೆ ಮರಗೋಡಿನಲ್ಲಿ ನಡೆದ 2018-19ನೇ ಸಾಲಿನ ಪ್ರೌಢಶಾಲಾ ವಿಭಾಗದ ಜಿಲ್ಲಾಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ ಇದೇ ಪ್ರೌಢಶಾಲೆಯ ವಿದ್ಯಾರ್ಥಿನಿ ಎನ್.ಎ. ಅಂಕಿತ ಅಥ್ಲೆಟಿಕ್ಸ್ ವಿಭಾಗದ 3 ಸಾವಿರ ಮೀಟರ್ ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ಶಾಲೆಯ ಪ್ರಕಟಣೆ ತಿಳಿಸಿದೆ.