ಸುಂಟಿಕೊಪ್ಪ, ಅ. 9: ಇತ್ತೀಚೆಗೆ ನಿಧನರಾದ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಹಾಗೂ ಅತಿವೃಷ್ಟಿಗೆ ಸಿಲುಕಿ ಕೊಡಗಿನಲ್ಲಿ ಮರಣವನ್ನಪ್ಪಿದವರಿಗೆ ಸುಂಟಿಕೊಪ್ಪ ಬಿ.ಜೆ.ಪಿ. ಸ್ಥಾನೀಯ ಸಮಿತಿ ವತಿಯಿಂದ ಶ್ರದ್ಧಾಂಜಲಿ ಅರ್ಪಿಸ ಲಾಯಿತು. ಇಲ್ಲಿನ ಮೀನಾಕ್ಷಮ್ಮ ಮಂಜುನಾಥಯ್ಯ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಅಧ್ಯಕ್ಷ ಪಿ.ಅರ್. ಸುನಿಲ್‍ಕುಮಾರ್ ಅವರ ಅಧ್ಯಕ್ಷತೆಯಲ್ಲಿ ವಾಜಪೇಯಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಅರ್ಪಿಸಿ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹಾರೈಸಲಾಯಿತು. ತಾಲೂಕು ಪಂಚಾಯಿತಿ ಸದಸ್ಯೆ ವಿಮಲಾವತಿ ಅವರು ವಾಜಪೇಯಿ ಅವರ ಗುಣಗಾನ ಮಾಡಿದರು. ಗ್ರಾ.ಪಂ. ಮಾಜಿ ಅಧ್ಯಕ್ಷೆ ಬಿ.ಐ. ಭವಾನಿ, ಯುವ ಮೋರ್ಚಾ ಅಧ್ಯಕ್ಷ ರಂಜಿತ್, ಗ್ರಾ.ಪಂ ಸದಸ್ಯ ಚಂದ್ರನ್, ಮಹಿಳಾ ಸಮಾಜದ ಅಧ್ಯಕ್ಷೆ ಲೀಲಾವತಿ, ವಿಗ್ನೇಶ್, ವಿನೋದ್, ಅಶೋಕ್ ಶೇಟ್ ಪ್ರಧಾನ ಕಾರ್ಯದರ್ಶಿ ಹಾಜರಿದ್ದರು. ಪ್ರಶಾಂತ್ ಸ್ವಾಗತಿಸಿ ವಂದಿಸಿದರು.