ಮಡಿಕೇರಿ, ಅ. 8 : ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ವತಿಯಿಂದ ಗಾಳಿಬೀಡು ಪ್ರೌಢಶಾಲೆಯ ನಿರಾಶ್ರಿತ ಮಕ್ಕಳಿಗೆ ಶಬ್ಧಕೋಶ ವಿತರಣಾ ಕಾರ್ಯಕ್ರಮ ತಾ.9 ರಂದು (ಇಂದು) ನಡೆಯಲಿದೆ.
ಬೆಳಿಗ್ಗೆ 11 ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ಡಿವೈಎಸ್‍ಪಿ ಸುಂದರಾಜ್ ಉದ್ಘಾಟಿಸಲಿದ್ದಾರೆ. ಮುಖ್ಯ ಭಾಷಣಕಾರರಾಗಿ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾ ರೈ ಪಾಲ್ಗೊಳ್ಳಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗಾಳಿಬೀಡು ಸಮಾಜ ಸೇವಕ ಟಿ.ಆರ್. ವಾಸುದೇವ್, ನೀಲ್ ಸಾಗರ್ ಹೊಟೇಲ್‍ನ ಮಾಲೀಕ ದಿನೇಶ್, ದಲಿತ ಸಂಘರ್ಷ ಸಮಿತಿಯ ತಾಲೂಕು ಸಂಚಾಲಕ ಹೆಚ್.ಎಲ್. ಕುಮಾರ್, ಸಂಘಟನಾ ಸಂಚಾಲಕ ಎಂ.ಪಿ. ದೀಪಕ್ ಉಪಸ್ಥಿತರಿರುವರು ಎಂದು ಸಮಿತಿಯ ಜಿಲ್ಲಾ ಸಂಚಾಲಕ ದಿವಾಕರ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.