ಆಲೂರು ಸಿದ್ದಾಪುರ, ಅ. 9: ಸರಕಾರಿ ಪ.ಪೂ.ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ 2018-19ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರ ಅ11 ರಿಂದ 17 ರವರೆಗೆ ಮಸಗೋಡು ಗ್ರಾಮದ ಮಹಿಳಾ ಸಮಾಜದಲ್ಲಿ ನಡೆಯಲಿದೆ. ಉದ್ಘಾಟನೆ ತಾ. 11 ರಂದು ಸಂಜೆ 5 ಗಂಟೆಗೆ ನಡೆಯಲಿದ್ದು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಶಿಬಿರವನ್ನು ಉದ್ಘಾಟಿಸಲಿದ್ದು ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿ.ಕೆ.ಚಂದ್ರಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಈ ಸಂದರ್ಭದಲ್ಲಿ ಜಿ.ಪಂ.ಸದಸ್ಯೆ ಪೂರ್ಣಿಮ ಗೋಪಾಲ್, ತಾ.ಪಂ.ಸದಸ್ಯೆ ಸವಿತ ಈರಪ್ಪ, ಕಾಲೇಜು ಪ್ರಾಂಶುಪಾಲ ಗಣಪತಿ ಭಟ್ ಮುಂತಾದವರು ಭಾಗವಹಿಸಲಿದ್ದಾರೆ ಎಂದು ಶಿಬಿರಾಧಿಕಾರಿ ಎಚ್.ಪಿ.ಶಿವಕುಮಾರ್ ತಿಳಿಸಿದ್ದಾರೆ.