ಗೋಣಿಕೊಪ್ಪ ವರದಿ, ಅ. 8: ಮೈಸೂರು ಸಂತ ಫಿಲೋಮಿನಾಸ್ ಕಾಲೇಜಿನಲ್ಲಿ ಮಾಸ್ಟರ್ ಆಫ್ ಸೈನ್ಸ್ ಫಿಜಿಕ್ಸ್ ವಿಭಾಗದಲ್ಲಿ ಉತ್ತಮ ಸಾಧನೆ ಮಾಡಿದ ಗೋಣಿಕೊಪ್ಪದ ಅಶ್ವಿತ ಅಶೋಕ್ ಚಿನ್ನದ ಪದಕ ಪಡೆದಿದ್ದಾರೆ. ಫಿಲೋಮಿನಾ ಕಾಲೇಜಿನಲ್ಲಿ ನಡೆದ 4ನೇ ಘಟಿಕೋತ್ಸವ ಪ್ರಶಸ್ತಿ ಸ್ವೀಕರಿಸಲಾಯಿತು. ಎಂ.ಎಸ್ಸಿ.ಯಲ್ಲಿ ಫಿಸಿಕ್ಸ್ ವಿಷಯದಲ್ಲಿ ಹೆಚ್ಚು ಅಂಕ ಗಳಿಸಿ ಸಾಧನೆ ಮಾಡಿದ್ದಾರೆ.