*ಗೋಣಿಕೊಪ್ಪಲು, ಅ. 8: ಬಾಳೆಲೆ ವಿಜಯಲಕ್ಷ್ಮಿ ಪದವಿ ಪೂರ್ವ ಕಾಲೇಜಿನಲ್ಲಿ ತಾ. 10 ರಂದು ಚಿಮ್ಮಣಮಾಡ ಟಿ. ಸುಬ್ಬಯ್ಯ ಸ್ಮಾರಕ ಪದವಿ ಪೂರ್ವ ಕಾಲೇಜುಗಳ ತಾಲೂಕು ಮಟ್ಟದ ಚರ್ಚಾ ಸ್ಪರ್ಧೆಯನ್ನು ಆಯೋಜಿಸಲಾಗಿದೆ.

ಬೆಳಿಗ್ಗೆ 10.30ಕ್ಕೆ ಆರಂಭಗೊಳ್ಳುವ ಸ್ಪರ್ಧೆಯನ್ನು ವಕೀಲ ಚಿಮ್ಮಣಮಾಡ ಎಸ್. ಮಾಚಯ್ಯ ಉದ್ಘಾಟಿಸಲಿದ್ದಾರೆ. ಬಾಳೆಲೆ ಸೆಂಟರ್ ಎಜುಕೇಷನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ ಅಧ್ಯಕ್ಷತೆ ವಹಿಸಲಿದ್ದಾರೆ.