ಮಡಿಕೇರಿ, ಅ. 8: ಕಾಲ್ಪನಿಕ ವೇತನ ಹಾಗೂ ನಿಶ್ಚಿತ ಪಿಂಚಣಿಗಾಗಿ ರಾಜ್ಯ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರ ಸಂಘದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ತಾ. 11 ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದು, ಈ ಪ್ರತಿಭಟನೆಯಲ್ಲಿ ಜಿಲ್ಲೆಯ 140 ಮಂದಿ ನೌಕರರು ಪಾಲ್ಗೊಳ್ಳಲಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಪೂಜಾರ್ ತಿಳಿಸಿದ್ದಾರೆ.