ಕುಶಾಲನಗರ, ಅ. 8: ಕುಶಾಲನಗರದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಶ್ರೀ ಶಿರಡಿ ಸಾಯಿಬಾಬ ದಿವ್ಯ ವಿಗ್ರಹ ಪ್ರತಿಷ್ಠಾಪನೆ ಹಾಗೂ ಕುಂಬಾಭಿಷೇಕ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳು ನಡೆದಿವೆ. ಕುಶಾಲನಗರದ ಸಾಯಿ ಬಡಾವಣೆಯಲ್ಲಿ ತಾ.11ರಂದು ಮೊದಲ ಕಳಶಾಭಿಷೇಕ ನಡೆಯಲಿದ್ದು ಆ ಸಂಬಂಧ ತಾ. 10 ರಿಂದ ಧಾರ್ಮಿಕ ಕಾರ್ಯಕ್ರಮಗಳು ಜರುಗಲಿವೆ. ತಾ. 11 ರಂದು ಬೆಳಿಗ್ಗೆ 9 ಗಂಟೆಯಿಂದ ವಿಗ್ರಹಕ್ಕೆ ಅಭಿಷೇಕ ಮಾಡುವ ಅವಕಾಶ ಕಲ್ಪಿಸಲಾಗಿದೆ ಎಂದು ಶ್ರೀ ಶಿರಡಿ ಸಾಯಿ ಟ್ರಸ್ಟ್ ಅಧ್ಯಕ್ಷರಾದ ಎಂ. ಧರೇಶ್‍ಬಾಬು ತಿಳಿಸಿದ್ದಾರೆ.

ಅಂದು ನಡೆಯಲಿರುವ ಸಭಾ ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಅರಮೇರಿ ಕಳಂಚೇರಿ ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಮತ್ತು ಗಾವಡಗೆರೆಯ ಶ್ರೀ ನಟರಾಜ ಸ್ವಾಮೀಜಿಗಳು ವಹಿಸಿ ಧಾರ್ಮಿಕ ಪ್ರವಚನ ನೀಡುವರು. ಸಭಾ ಉದ್ಘಾಟನೆ ಜಿಲ್ಲಾ ಉಸ್ತುವಾರಿ ಸಚಿವ ಸಾ.ರಾ.ಮಹೇಶ್ ನಡೆಸಲಿದ್ದು ಕ್ಷೇತ್ರ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಸಂಸದ ಪ್ರತಾಪ್‍ಸಿಂಹ ಮತ್ತಿತರ ಜನಪ್ರತಿನಿಧಿಗಳು ಉಪಸ್ಥಿತರಿರುವರು.

ತಾ. 12 ರಂದು ಬೆಳಿಗ್ಗೆ ಪೂಜಾ ಕಾರ್ಯಕ್ರಮದೊಂದಿಗೆ ಪ್ರತಿಷ್ಠಾಪನಾ ಕಾರ್ಯ ಮುಕ್ತಾಯಗೊಳ್ಳಲಿದೆ ಎಂದು ಶ್ರೀ ಶಿರಡಿ ಸಾಯಿ ಟ್ರಸ್ಟ್‍ನ ಅಧ್ಯಕ್ಷ ಎಂ. ಧರೇಶ್‍ಬಾಬು ತಿಳಿಸಿದ್ದಾರೆ.