ಕೂಡಿಗೆ, ಅ. 11 : ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಡಿಕೇರಿ, ಕೊಡಗು ಜಿಲ್ಲೆ ಮತ್ತು ಆಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆ ಕೂಡಿಗೆ ಸಂಯುಕ್ತಾಶ್ರಯದಲ್ಲಿ ತಾ. 12 ರಂದು (ಇಂದು) ಕೂಡಿಗೆ ವಿದ್ಯಾಸಂಸ್ಥೆಯಲ್ಲಿ 12.30 ಗಂಟೆಗೆ ಚಿಗುರು ಕಾರ್ಯಕ್ರಮ ನಡೆಯಲಿದೆ.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪ್ರೇಮಲೀಲಾ ಅಧ್ಯಕ್ಷತೆಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ತಾಲೂಕು ಪಂಚಾಯಿತಿ ಸದಸ್ಯೆ ಸಬೀತಾ ಚನ್ನಕೇಶವ, ಕೂಡಿಗೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಕೆ.ಟಿ.ಗಿರೀಶ್, ಶಾಲೆಯ ಮುಖ್ಯ ಶಿಕ್ಷಕಿ ವೀಣಾ ವಿಜಯ ಆಗಮಿಸಲಿದ್ದಾರೆ.

ಚಿಗುರು ಕಾರ್ಯಕ್ರಮದಲ್ಲಿ ಹಿಂದೂಸ್ತಾನಿ ವಾದ್ಯ ಸಂಗೀತ, ಕರ್ನಾಟಕ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆಗಳು, ಭರತನಾಟ್ಯ, ಜಾನಪದ ನೃತ್ಯ, ಏಕ ಪಾತ್ರಾಭಿನಯ, ಸಮೂಹ ಕಾರ್ಯಕ್ರಮಗಳು ಹಾಗೂ ಶಾಮಸ್ತ್ರೀಯ ನೃತ್ಯ ರೂಪಕ ಸಾಂಸ್ಕøತಿಕ ಕಾರ್ಯಕ್ರಮಗಳು ನಡೆಯಲಿವೆ.