ಮಡಿಕೇರಿ, ಅ. 11: ವರ್ಗಾವಣೆ ಗೊಂಡಿರುವ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆತ್ಮೀಯ ಹಾಗೂ ಹೃದಯ ಸ್ಪರ್ಶಿಯಾಗಿ ಬೀಳ್ಕೊಡುಗೆ ನೀಡಲಾಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪ್ರಶಾಂತ್ ಕುಮಾರ್ ಮಿಶ್ರ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

ಮಾತನಾಡಿದ ಪ್ರಶಾಂತ್ ಕುಮಾರ್ ಮಿಶ್ರ ಅವರು ವಿಧಾನಸಭಾ ಚುನಾವಣೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಮಡಿಕೇರಿ, ಅ. 11: ವರ್ಗಾವಣೆ ಗೊಂಡಿರುವ ಜಿ.ಪಂ. ಸಿಇಒ ಪ್ರಶಾಂತ್ ಕುಮಾರ್ ಮಿಶ್ರ ಅವರಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ವತಿಯಿಂದ ಆತ್ಮೀಯ ಹಾಗೂ ಹೃದಯ ಸ್ಪರ್ಶಿಯಾಗಿ ಬೀಳ್ಕೊಡುಗೆ ನೀಡಲಾಯಿತು.

ನಗರದ ಕೋಟೆ ಹಳೇ ವಿಧಾನ ಸಭಾಂಗಣದಲ್ಲಿ ಪ್ರಶಾಂತ್ ಕುಮಾರ್ ಮಿಶ್ರ ಅವರನ್ನು ಸನ್ಮಾನಿಸಿ ಬೀಳ್ಕೊಡುಗೆ ನೀಡಲಾಯಿತು.

ಮಾತನಾಡಿದ ಪ್ರಶಾಂತ್ ಕುಮಾರ್ ಮಿಶ್ರ ಅವರು ವಿಧಾನಸಭಾ ಚುನಾವಣೆ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯ ನಿರ್ವಹಿಸಿದ್ದೇವೆ ಎಂದು ಹೇಳಿದರು.

ವಿಧಾನಸಭಾ ಚುನಾವಣಾ ಸಂದರ್ಭದಲ್ಲಿ ಮತದಾರರ ಜಾಗೃತಿ ಕಾರ್ಯಕ್ರಮಗಳನ್ನು ವ್ಯವಸ್ಥಿತವಾಗಿ ಏರ್ಪಡಿಸಿ ಮೆಚ್ಚುಗೆಗೆ ಪಾತ್ರರಾದರು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಮನ್ ಡಿ. ಪೆಣ್ಣೇಕರ್ ಮಾತನಾಡಿ, ವಿಚಾರಗಳನ್ನು ಸಮಗ್ರವಾಗಿ ತಿಳಿದುಕೊಂಡು ಕಾರ್ಯನಿರ್ವಹಿಸು ತ್ತಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ವಿವಿಧ ಇಲಾಖೆ ಅಧಿಕಾರಿಗಳು ಪ್ರಶಾಂತ್ ಕುಮಾರ್ ಮಿಶ್ರ ಅವರ ಆಡಳಿತವನ್ನು ಗುಣಗಾನ ಮಾಡಿದರು.