ಮಡಿಕೇರಿ, ಅ. 11: 2019ರ ಜನವರಿ 1ಕ್ಕೆ 18 ವರ್ಷ ಪೂರ್ಣಗೊಳ್ಳುವ ಯುವಕ, ಯುವತಿಯರು ಮತ್ತು 18 ವರ್ಷ ಮೇಲ್ಪಟ್ಟ ನಾಗರಿಕರು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗದೆ ವಂಚಿತರಾಗಿದ್ದಲ್ಲಿ, ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ಮತ್ತು ಈಗಾಗಲೇ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಯಾಗಿರುವ ಮತದಾರರು ಮೃತ, ಸ್ಥಳಾಂತರ, ಪುನರಾವರ್ತನೆ ಆಗಿದ್ದಲ್ಲಿ ಹೆಸರುಗಳನ್ನು ತೆಗೆಯಲು ನಮೂನೆ-7ರಲ್ಲಿ ಮತ್ತು ಮತದಾರರ ಗುರುತಿನ ಚೀಟಿಯಲ್ಲಿನ ನಮೂದುಗಳು, ತಪ್ಪಾಗಿದ್ದಲ್ಲಿ ತಿದ್ದುಪಡಿ ಮಾಡಲು ನಮೂನೆ-8 ರಲ್ಲಿ ಹಾಗೂ ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ ಮಾಡಲು ನಮೂನೆ-8 ರಲ್ಲಿ ಮತ್ತು ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ಹೆಸರು ಸೇರಿಸಲು ನಮೂನೆ-6 ರಲ್ಲಿ ತಾ. 10 ರಿಂದ ನವೆಂಬರ್ 20 ರವರೆಗೆ ತಮ್ಮ ಮತಗಟ್ಟೆಯ ಬೂತ್ ಮಟ್ಟದ ಅಧಿಕಾರಿಗಳಿಗೆ ಮತ್ತು ಸಂಬಂಧಪಟ್ಟ ತಾಲೂಕು ಕಚೇರಿಗಳಿಗೆ ನಿಗದಿತ ನಮೂನೆಯಲ್ಲಿ (ನಮೂನೆ-6 ಸೇರ್ಪಡೆ, ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-7 ಮತದಾರರ ಪಟ್ಟಿಯಿಂದ ಹೆಸರು ತೆಗೆಯಲು, ನಮೂನೆ-8 ತಿದ್ದುಪಡಿಗಾಗಿ ಮತ್ತು ನಮೂನೆ-8ಎ ಒಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಿಂದ ಇನ್ನೊಂದು ಮತಗಟ್ಟೆಗೆ ವರ್ಗಾವಣೆ) ಸಲ್ಲಿಸಬಹುದಾಗಿರುತ್ತದೆ.
ಹೆಚ್ಚಿನ ಮಾಹಿತಿಗೆ ಜಿಲ್ಲಾಧಿಕಾರಿಗಳ, ಉಪ ವಿಭಾಗಾಧಿಕಾರಿಗಳ ಮತ್ತು ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸಬಹುದು ಹಾಗೂ ತಿತಿತಿ.ಛಿeoಞಚಿಡಿಟಿಚಿಣಚಿಞಚಿ.ಞಚಿಡಿ.ಟಿiಛಿ.iಟಿ ವೆಬ್‍ಸೈಟ್‍ನಲ್ಲಿಯೂ ಸಹ ಮಾಹಿತಿಯನ್ನು ಪಡೆಯಬಹುದು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ತಿಳಿಸಿದ್ದಾರೆ.