ನಾಪೋಕ್ಲು, ಅ. 10: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಬಾರ ಪ್ರಾಂಶುಪಾಲೆ ಕಾವೇರಿ ಪ್ರಕಾಶ್ ಅವರನ್ನು ಮಾತೃಭೂಮಿ ಯುವ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಮೈಸೂರು ವಿಶ್ವವಿದ್ಯಾನಿಲಯದ ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಈಚೆಗೆ ನಡೆದ ಕಾರ್ಯಕ್ರಮದಲ್ಲಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಜಿಲ್ಲೆಯಲ್ಲಿ ಜಾನಪದ ಸಾಹಿತ್ಯ ಸೇವೆಗಾಗಿ 2018ರ ಸಾಲಿನ ಮಾತೃಭೂಮಿ ಯುವ ಪ್ರಶಸ್ತಿ ಇವರಿಗೆ ಸಂದಿದೆ.