ಮಡಿಕೇರಿ, ಅ. 11: ಮೆಟ್ರಿಕ್ ನಂತರದ ಕೋರ್ಸ್‍ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19ನೇ ಸಾಲಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ, ಶುಲ್ಕ ವಿನಾಯಿತಿ, ವಿದ್ಯಾಸಿರಿ ಊಟ ಮತ್ತು ವಸತಿ ಸಹಾಯ ಯೋಜನೆ ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕಾದ ವೆಬ್‍ಸೈಟ್ ವಿಳಾಸ ತಿತಿತಿ.ಞಚಿಡಿeಠಿಚಿss.ಛಿgg.gov.iಟಿ, ತಿತಿತಿ.bಚಿಛಿಞತಿಚಿಡಿಜಛಿಟಚಿses.ಞಚಿಡಿ.ಟಿiಛಿ.iಟಿ ಹಾಗೂ ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು ಹಾಗೂ ವಿದ್ಯಾರ್ಥಿ ವೇತನಕ್ಕೆ ಸಂಬಂಧಿಸಿದ ಸರ್ಕಾರಿ ಆದೇಶಗಳ ಬಗ್ಗೆ ಮಾಹಿತಿಗೆ ತಿತಿತಿ.bಚಿಛಿಞತಿಚಿಡಿಜಛಿಟಚಿses.ಞಚಿಡಿ.ಟಿiಛಿ.iಟಿ ವೆಬ್‍ಸೈಟ್ ಅನ್ನು ಸಂಪರ್ಕಿಸಬಹುದಾಗಿದೆ.

ಅರ್ಜಿ ಸಲ್ಲಿಸಲು ತಾ. 31 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜು ಅರಸು ಭವನ, ಮಡಿಕೇರಿ. ದೂರವಾಣಿ ಸಂಖ್ಯೆ 08272-225628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿ ಆರ್.ಅವಿನ್ ಅವರು ತಿಳಿಸಿದ್ದಾರೆ.