ಮಡಿಕೇರಿ, ಅ. 10: ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಪೊನ್ನಂಪೇಟೆ ವಕೀಲರ ಸಂಘ ಹಾಗೂ ಸಾಯಿಶಂಕರ ವಿದ್ಯಾಸಂಸ್ಥೆ ಇವರ ಸಂಯುಕ್ತಾಶ್ರಯದಲ್ಲಿ ‘ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ’ ಅಂಗವಾಗಿ ಕಾನೂನು ಕಾರ್ಯಾಗಾರವು ತಾ. 11 ರಂದು ಬೆಳಿಗ್ಗೆ 11 ಗಂಟೆಗೆ ಪೊನ್ನಂಪೇಟೆಯ ಸಾಯಿ ಶಂಕರ ಎಜುಕೇಷನಲ್ ಇನ್ಸ್ಟಿಟ್ಯೂಷನ್‍ನ ಪ್ರಶಾಂತಿ ನಿಲಯದಲ್ಲಿ ನಡೆಯಲಿದೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ನೂರುನ್ನಿಸ, ಪೊನ್ನಂಪೇಟೆ ಸಾಯಿಶಂಕರ ವಿದ್ಯಾಂಸ್ಥೆಯ ಅಧ್ಯಕ್ಷ ಕೋಳೆರ ಝರು ಗಣಪತಿ, ಪೊನ್ನಂಪೇಟೆ ವಕೀಲರ ಸಂಘದ ಅಧ್ಯಕ್ಷ ಸುಳ್ಳಿಮಾಡ ಕಾವೇರಪ್ಪ, ಸಾಯಿಶಂಕರ ವಿದ್ಯಾಸಂಸ್ಥೆಯ ನಿರ್ದೇಶಕ ಅರಮಾಣಮಾಡ ಸತೀಶ್ ದೇವಯ್ಯ, ವಕೀಲರಾದ ಕೆ.ಎಂ.ಮೀನಾ ಕುಮಾರಿ, ವಕೀಲೆ ಕಂಜಿತಂಡ ಅನಿತ ಇತರರು ಪಾಲ್ಗೊಳ್ಳಲಿದ್ದಾರೆ.