ನಾಪೆÇೀಕ್ಲು, ಅ. 10: ಕೊಡವರು ತಮ್ಮ ಮಕ್ಕಳ ವಿದ್ಯಾರ್ಥಿ ವೇತನ ಹಾಗೂ ಮತ್ತಿತರ ಸೌಲಭ್ಯಗಳಿಗಾಗಿ ಪಡೆಯುವ ಜಾತಿ ದೃಢೀಕರಣ ಪತ್ರ ಮತ್ತು ಆದಾಯ ಪ್ರಮಾಣ ಪತ್ರದಲ್ಲಿ ಕೊಡವರು ಎಂಬದಕ್ಕೆ ಬದಲಾಗಿ ಕೊಡಗರು ಎಂದು ನೀಡಲಾಗುತ್ತಿದೆ. ಇದನ್ನು ಕೊಡವರು ಎಂದೇ ನೀಡಬೇಕು ಎಂದು ಕುಂಜಿಲ-ಕಕ್ಕಬೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಕರ್ತಂಡ ಶೈಲಾ ಕುಟ್ಟಪ್ಪ ಆಗ್ರಹಿಸಿದ್ದಾರೆ.
ಈ ಬಗ್ಗೆ ‘ಶಕ್ತಿ’ಗೆ ಹೇಳಿಕೆ ನೀಡಿದ ಅವರು ಕೆಲವು ಸರಕಾರಿ ಅಧಿಕಾರಿಗಳ ಬೇಜವಾಬ್ದಾರಿತನದಿಂದ ಜಾತಿ ಪ್ರಮಾಣ ಪತ್ರದಲ್ಲಿ ಸಮಸ್ಯೆಗಳು ತಲೆದೋರುತ್ತಿದೆ. ಇದನ್ನು ಸರಿಪಡಿಸಲು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಆಗ್ರಹಿಸಿದ್ದಾರೆ.