ಮಡಿಕೇರಿ, ಅ.11: 2016-17ನೇ ಸಾಲಿನ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿ (6-8) ಸಂಬಂಧ 1:1 ಅನುಪಾತದಲ್ಲಿ ಆಯ್ಕೆ ಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿಯನ್ನು ಇಲಾಖಾ ವೆಬ್‍ಸೈಟ್ ನಲ್ಲಿ ಹಾಗೂ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಈ ಆಯ್ಕೆಪಟ್ಟಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಅಭ್ಯರ್ಥಿಗಳು ತಾ. 11 ರಿಂದ ತಾ. 16 ರವರೆಗೆ ಕೇಂದ್ರೀಕೃತ ದಾಖಲಾತಿ ಘಟಕ ಕೆ.ಜಿ.ರಸ್ತೆ ಬೆಂಗಳೂರು ಕಚೇರಿಗೆ ಸಲ್ಲಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.