ಮಡಿಕೇರಿ, ಅ. 10: ತಾ. 15 ರಂದು ಬೆಳಿಗ್ಗೆ 11 ಗಂಟೆಗೆ ಕೊಡಗು ಪತ್ರಿಕಾ ಭವನದ 17ನೇ ವಾರ್ಷಿಕೋತ್ಸವವು ಮಡಿಕೇರಿಯ ಕೊಡಗು ಪತ್ರಿಕಾ ಭವನದಲ್ಲಿ ನಡೆಯಲಿದೆ. ಈ ಪ್ರಯುಕ್ತ ‘ಪ್ರಕೃತಿ ವಿಕೋಪ ಪರಿಸರ ಸೂಕ್ಮ ವಲಯ-ಮುಂದಿನ ಹೆಜ್ಜೆಗಳು’ ಎಂಬ ವಿಚಾರದಲ್ಲಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದ್ದು, ಕುಟ್ಟದ ಕಾಫಿ ಬೆಳೆಗಾರ, ಕಾಪ್ಸ್ ವಿದ್ಯಾಸಂಸ್ಥೆಯ ಟ್ರಸ್ಟಿ ಮಾಚಿಮಾಡ ರಾಜಾತಿಮ್ಮಯ್ಯ ಉಪನ್ಯಾಸ ನೀಡಲಿದ್ದಾರೆ.
ಕಾರ್ಯಕ್ರಮವನ್ನು ಬೆಂಗಳೂರಿನ ಎನ್ಟಿಪಿಸಿ ಸಂಸ್ಥೆಯ ಸಲಹೆಗಾರರು, ಕೆ.ಪಿ.ಸಿ.ಎಲ್ ಸಂಸ್ಥೆಯ ಮಾಜಿ ನಿರ್ದೇಶಕ ಎಮಿರೈಟ್ಸ್ ಸಂಸ್ಥೆಯ ಚೇರ್ಮೆನ್ ಆದ ಎಂ.ಬಿ. ಜಯರಾಂ ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೊಡಗು ಪತ್ರಿಕಾ ಭವನ ಟ್ರಸ್ಟ್ನ ಮ್ಯಾನೇಜಿಂಗ್ ಟ್ರಸ್ಟಿ ಹಾಗೂ ಕೊಡಗು ಸಮಾಚಾರ ಪತ್ರಿಕೆಯ ಸಂಪಾದಕ ಬಿ.ಎನ್. ಮನು ಶೆಣೈ ವಹಿಸಲಿದ್ದಾರೆ. ವಾರ್ಷಿಕೋತ್ಸವ ಪ್ರಯುಕ್ತ ನಡೆದ ಟೇಬಲ್ ಟೆನ್ನಿಸ್ ಸ್ಪರ್ಧೆಯ ಬಹುಮಾನ ವಿತರಣೆ ಕಾರ್ಯಕ್ರಮ ಇದೇ ವೇದಿಕೆಯಲ್ಲಿ ನಡೆಯಲಿದೆ ಎಂದು ಪತ್ರಿಕಾ ಭವನ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಎಸ್.ಜಿ. ಉಮೇಶ್ ತಿಳಿಸಿದ್ದಾರೆ.