ಮೂರ್ನಾಡು, ಅ. 10: ಇತ್ತೀಚಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಡಿಕೇರಿಯ ಸಂತ ಜೋಸೆಫ್‍ರ ಶಾಲೆಯಲ್ಲಿ ಜರುಗಿದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಇಂಗ್ಲೀಷ್ ಭಾಷಣ ಸ್ಪರ್ಧೆಯಲ್ಲಿ ಮೂರ್ನಾಡು ಪದವಿಪೂರ್ವ ಕಾಲೇಜಿನ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಪಿ.ಪಿ. ಶ್ರೀರಕ್ಷ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿಗೆ ಆಯ್ಕೆಯಾಗಿರುತ್ತಾರೆ ಎಂದು ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕ್ಕಿ ತಿಳಿಸಿದ್ದಾರೆ.