ಮಡಿಕೇರಿ, ಅ. 10: ಮಡಿಕೇರಿಯ ಸರಕಾರಿ ಪದವಿಪೂರ್ವ ಕಾಲೇಜಿನ ವಿದಾರ್ಥಿಗಳು ಅಕ್ಟೋಬರ್ 7 ರಂದು ಗೋಣಿಕೊಪ್ಪದ ಕಾವೇರಿ ಕಾಲೇಜಿನಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಭಾಗವಹಿಸಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ. ಪ್ರಥಮ ಸ್ಥಾನಗಳಿಸಿದ 15 ವಿದ್ಯಾರ್ಥಿನಿಯರು ರಾಜ್ಯಮಟ್ಟದ ಪಂದ್ಯಾವಳಿಗೆ ಆಯ್ಕೆಯಾಗಿದ್ದು, ಪಂದ್ಯಾವಳಿಗಾಗಿ ಬಾಗಲಕೋಟೆಗೆ ತೆರಳಲಿದ್ದಾರೆ.