ಕೂಡಿಗೆ, ಅ. 13: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಆಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಆಂಜೆಲಾ ವಿದ್ಯಾಸಂಸ್ಥೆಯಲ್ಲಿ ಚಿಗುರು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ. ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಕೂಡಿಗೆ, ಅ. 13: ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮತ್ತು ಆಂಜೆಲಾ ವಿದ್ಯಾನಿಕೇತನ ವಿದ್ಯಾಸಂಸ್ಥೆಯ ಸಂಯುಕ್ತಾಶ್ರಯದಲ್ಲಿ ಇಲ್ಲಿನ ಆಂಜೆಲಾ ವಿದ್ಯಾಸಂಸ್ಥೆಯಲ್ಲಿ ಚಿಗುರು ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವನ್ನು ಜಿಲ್ಲಾ ಪಂಚಾಯಿತಿ ಸದಸ್ಯೆ ಕೆ.ಆರ್. ಮಂಜುಳಾ ಉದ್ಘಾಟಿಸಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಅಡಗಿರುವ ಸುಪ್ತ ಪ್ರತಿಭೆಗಳನ್ನು ಅನಾವರಣಗೊಳಿಸಲು ಇಂತಹ ಕಾರ್ಯಕ್ರಮಗಳು ಅಗತ್ಯ. ವಿದ್ಯಾರ್ಥಿಗಳಿಗೆ ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ಕ್ರೀಡೆ ಜೀವನದ ಅವಿಭಾಜ್ಯ ಅಂಗವಾಗಬೇಕು. ವಿದ್ಯಾರ್ಥಿಗಳು ಕಲಿಕೆಯೊಂದಿಗೆ ಇಲಾಖೆಯ ಅಧಿಕಾರಿ ದರ್ಶನ್ ಮಾತನಾಡಿ, ಇಲಾಖೆಯ ವತಿಯಿಂದ ಇಂತಹ ಕಾರ್ಯಕ್ರಮ ವನ್ನು ಹಮ್ಮಿಕೊಳ್ಳುವದರಿಂದ ಮಕ್ಕಳಿಗೆ ಕಲೆ ಮತ್ತು ಸಂಸ್ಕøತಿಗೆ ಪ್ರೋತ್ಸಾಹ ನೀಡಿದಂತಾಗುತ್ತದೆ.
ಇಲಾಖೆಯ ಮಣಜೂರು ಮಂಜುನಾಥ್ ಮಾತನಾಡಿ, ಜಿಲ್ಲೆಯ ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ವೈವಿದ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಮಕ್ಕಳಲ್ಲಿರುವ ಕಲೆ, ಸಂಸ್ಕøತಿಯನ್ನು ಹೊರಹೊಮ್ಮಿಸುವಲ್ಲಿ ಅನುಕೂಲವಾಗುತ್ತವೆ ಎಂದರು.
ಕುಶಾಲನಗರ ಕಾರ್ಯನಿರತ ಪತ್ರಕರ್ತರ ಸಂಘದ ಅದ್ಯಕ್ಷ ಸಬಲಂ ಬೋಜಣ್ಣರೆಡ್ಡಿ ಮಾತನಾಡಿ, ಪ್ರತಿಭೆ
ಪ್ರತಿ ಮಕ್ಕಳಲ್ಲಿ ಸಹಜವಾಗಿಯೇ ಇರುತ್ತದೆ. ಅದು ಸಂದರ್ಭೋಚಿತ ವಾಗಿ ಹೊರಬರುತ್ತದೆ. ಅಂತಹ ಪ್ರತಿಭೆ ಹೊರಹೊಮ್ಮಲು ಇಂತಹ ವೇದಿಕೆಗಳು ಅವಕಾಶ ನೀಡುತ್ತವೆ ಎಂದರು. ಅಧ್ಯಕ್ಷತೆಯನ್ನು ಶಾಲೆಯ ಮುಖ್ಯ ಶಿಕ್ಷಕಿ ವೀಣಾ ವಿಜಯ ವಹಿಸಿದ್ದರು. ಚಿಗುರು ಕಾರ್ಯಕ್ರಮ ದಲ್ಲಿ ಹಿಂದೂಸ್ತಾನಿ ವಾದ್ಯ ಸಂಗೀತ, ಕರ್ನಾಟಕ ಸಂಗೀತ, ಸುಗಮ ಸಂಗೀತ, ಜಾನಪದ ಗೀತೆಗಳು, ಭರತನಾಟ್ಯ, ಜಾನಪದ ನೃತ್ಯ, ಏಕ ಪಾತ್ರಾಭಿನಯ, ಸಮೂಹ ಕಾರ್ಯಕ್ರಮಗಳು ಹಾಗೂ ಶಾಸ್ತ್ರೀಯ ನೃತ್ಯ ರೂಪಕ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ವಿದ್ಯಾರ್ಥಿಗಳು ನಡೆಸಿಕೊಟ್ಟರು.