ಕುಶಾಲನಗರ, ಅ. 13: ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸರಕಾರಿ ಶಾಲೆಗಳಿಗೆ ಸಂಘ-ಸಂಸ್ಥೆಗಳು, ದಾನಿಗಳು ಅಗತ್ಯ ನೆರವು ನೀಡುವ ಮೂಲಕ ಶಾಲೆಗಳ ಅಭಿವೃದ್ಧಿಗೆ ಸಹಕರಿಸಬೇಕೆಂದು ಪಿರಿಯಾಪಟ್ಟಣ ಕ್ಷೇತ್ರ ಶಾಸಕ ಕೆ. ಮಹದೇವ್ ಹೇಳಿದರು. ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ಎಲ್‍ಡಿಸಿ ಸಂಸ್ಥೆ ವತಿಯಿಂದ ನಿರ್ಮಿಸಲಾಗಿರುವ ಭೋಜನಾಲಯ ವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಭೋಜ ನಾಲಯ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಿ, ಮಹದೇವ್ ಹೇಳಿದರು. ಕೊಪ್ಪ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರೂ. 12 ಲಕ್ಷ ವೆಚ್ಚದಲ್ಲಿ ಎಲ್‍ಡಿಸಿ ಸಂಸ್ಥೆ ವತಿಯಿಂದ ನಿರ್ಮಿಸಲಾಗಿರುವ ಭೋಜನಾಲಯ ವನ್ನು ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. ಕಾರ್ಯಕ್ರಮದಲ್ಲಿ ಭೋಜ ನಾಲಯ ನಿರ್ಮಾಣಕ್ಕೆ ಸಹಕರಿಸಿದ ದಾನಿಗಳನ್ನು ಸನ್ಮಾನಿಸಿ, ಗೌರವಿಸಲಾಯಿತು. ವೇದಿಕೆಯಲ್ಲಿ ಜಿ.ಪಂ. ಸದಸ್ಯ ರಾಜೇಂದ್ರ, ತಾ.ಪಂ. ಸದಸ್ಯರುಗಳಾದ ಮುತ್ತಣ್ಣ, ಜಯಂತಿ, ಕೊಪ್ಪ ಗ್ರಾ.ಪಂ. ಅಧ್ಯಕ್ಷೆ ಸಾಹಿನ ಭಾನು, ಉಪಾಧ್ಯಕ್ಷ ಯಶವಂತಕುಮಾರ್, ಕ್ಷೇತ್ರ ಶಿಕ್ಷಣಾಧಿಕಾರಿ ಚಿಕ್ಕಸ್ವಾಮಿ, ಉದ್ಯಮಿ ಎಂ.ಕೆ. ದಿನೇಶ್, ನಿವೃತ್ತ ಪ್ರಾಂಶುಪಾಲ ಹೆಚ್.ವಿ. ಶಿವಪ್ಪ ಮತ್ತಿತರರು ಇದ್ದರು.