ಸೋಮವಾರಪೇಟೆ, ಅ. 13: ಶಾಲೆಯಲ್ಲಿ ಸಹಪಾಠಿಗಳೊಂದಿಗೆ ಆಟವಾಡುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಬಿದ್ದು, ಕಾಲಿನ ಮೂಳೆ ಮುರಿತಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಗೆ ದೊಡ್ಡಮಳ್ತೆ ಗ್ರಾಮದ ಶ್ರೀರಾಮ ಸೇವಾ ಸಮಿತಿಯಿಂದ ಆರ್ಥಿಕ ಸಹಾಯ ಒದಗಿಸಲಾಯಿತು. ದೊಡ್ಡಮಳ್ತೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 4ನೇ ತರಗತಿ ವಿದ್ಯಾರ್ಥಿನಿ ಶಾಲಿನಿ, ಆಟವಾಡುತ್ತಿದ್ದ ಸಂದರ್ಭ ಬಿದ್ದು ಕಾಲಿನ ಮೂಳೆ ಮುರಿದುಕೊಂಡಿದ್ದು, ಚಿಕಿತ್ಸೆಗಾಗಿ ಸಮಿತಿಯ ವತಿಯಿಂದ ರೂ. 4 ಸಾವಿರ ಸಹಾಯಧನ ನೀಡಲಾಯಿತು. ಈ ಸಂದರ್ಭ ಸಮಿತಿಯ ಅಧ್ಯಕ್ಷ ಬಿ.ಎಸ್. ನಾರಾಯಣ, ಪದಾಧಿಕಾರಿಗಳಾದ ಸತೀಶ್ ವಳಗುಂದ, ಪುಷ್ಪಾಧರ್, ಲೋಕೇಶ್, ಮಣಿಕಂಠ, ಎಸ್‍ಡಿಎಂಸಿ ಅಧ್ಯಕ್ಷ ಕೆ.ಆರ್. ಸತೀಶ್, ಮುಖ್ಯ ಶಿಕ್ಷಕ ರೇಣುಕಸ್ವಾಮಿ ಅವರುಗಳು ಉಪಸ್ಥಿತರಿದ್ದರು.