ಮಡಿಕೇರಿ, ಅ. 15: ವೀರಾಜಪೇಟೆ, ಕುಶಾಲನಗರ ಹಾಗೂ ಸೋಮವಾರಪೇಟೆ ಪಟ್ಟಣ ಪಂಚಾಯಿತಿಗಳಿಗೆ ಚುನಾವಣೆ ನಡೆಸಲು ಜಿಲ್ಲಾಧಿಕಾರಿಗಳು ಅಧಿಸೂಚನೆ ಹೊರಡಿಸಿದ್ದು, ನಾಮಪತ್ರ ಸಲ್ಲಿಕೆಗೆ ತಾ. 16 ರಂದು (ಇಂದು) ಕೊನೆಯ ದಿನವಾಗಿದೆ.ಜಿಲ್ಲಾಧಿಕಾರಿಗಳ ಕಚೇರಿಯ ಲ್ಲಿಂದು ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಶ್ರೀವಿದ್ಯಾ ಅವರು ಅಧಿಸೂಚನೆ ಪ್ರಕಟಿಸಿದರು. ತಾ 28 ರಂದು ಮೂರು ಕೇಂದ್ರಗಳಲ್ಲಿ ಚುನಾವಣೆ ನಡೆಯಲಿದೆ. ನಾಮಪತ್ರ ಸಲ್ಲಿಸಲು ತಾ. 16 ಕೊನೆಯ ದಿನವಾಗಿದೆ. ತಾ. 17 ರಂದು ನಾಮಪತ್ರಗಳ ಪರಿಶೀಲನಾ ಕಾರ್ಯ ನಡೆಯಲಿದೆ. ನಾಮಪತ್ರ ಹಿಂತೆಗೆದುಕೊಳ್ಳಲು ತಾ. 20 ಕೊನೆಯ ದಿನವಾಗಿದೆ. ಮತದಾನ ಅವಶ್ಯವಿದ್ದಲ್ಲಿ ತಾ. 28 ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5 ಗಂಟೆವರೆಗೆ ಮತದಾನ ನಡೆಯಲಿದೆ. ಮರುಮತದಾನ ಅವಶ್ಯವಿದ್ದಲ್ಲಿ ತಾ. 30 ರಂದು ಮರು ಮತದಾನ ನಡೆಸಬಹುದಾಗಿದೆ. ತಾ. 31 ರಂದು ಬೆಳಿಗ್ಗೆ 8 ಗಂಟೆಯಿಂದ ಆಯಾ ತಾಲೂಕು ಕೇಂದ್ರಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ ಎಂದು ತಿಳಿಸಿದರು. ಸೋಮವಾರಪೇಟೆ 11, ಕುಶಾಲನಗರ 16, ವೀರಾಜಪೇಟೆ 18 ವಾರ್ಡ್‍ಗಳು ಸೇರಿದಂತೆ ಒಟ್ಟು 45 ವಾರ್ಡ್‍ಗಳಿಗೆ ಚುನಾವಣೆ ನಡೆಯಲಿದೆ.