ಮಡಿಕೇರಿ, ಅ. 15 : ಗೋಣಿಕೊಪ್ಪದಲ್ಲಿ ನಡೆಯಲಿರುವ ದಸರಾ ಮಂಟಪಗಳ ಮೆರವಣಿಗೆ ಸಂದರ್ಭದಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮೋಟಾರು ವಾಹನ ಕಾಯ್ದೆ 1988ರ ಕಲಂ 115 ಹಾಗೂ ಕರ್ನಾಟಕ ಮೋಟಾರು ವಾಹನಗಳ ನಿಯಮ 1989ರ (ತಿದ್ದುಪಡಿ ನಿಯಮಾವಳಿ 1990) ನಿಯಮ 221ಎ (5) ರಲ್ಲಿ ದತ್ತವಾದ ಅಧಿಕಾರದಂತೆ ತಾ. 19 ರ ಸಂಜೆ 4 ಗಂಟೆಯಿಂದ ತಾ. 20ರ ಬೆಳಿಗ್ಗೆ 8 ಗಂಟೆಯವರೆಗೆ ಗೋಣಿಕೊಪ್ಪದಲ್ಲಿ ಬದಲಿ ವಾಹನ ಸಂಚಾರ ವ್ಯವಸ್ಥೆಯನ್ನು ನಿರ್ವಹಿಸಲು ಆರಕ್ಷಕ ಅದಿsೀಕ್ಷಕರು ಹಾಗೂ ಪ್ರಾದೇಶಿಕ ಸಾರಿಗೆ ಅಧಿಕಾರಿ ಇವರಿಗೆ ಅನುಮತಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ. ಶ್ರೀವಿದ್ಯಾ ಅವರು ಆದೇಶ ಹೊರಡಿಸಿದ್ದಾರೆ. ಬದಲಿ ಸಂಚಾರ ವ್ಯವಸ್ಥೆ: ಗೋಣಿಕೊಪ್ಪಲು ನಗರದ ಉಮಾ ಮಹೇಶ್ವರಿ ದೇವಸ್ಥಾನದಿಂದ ಹರಿಶ್ಚಂದ್ರಪುರದವರೆಗೆ ಪೊನ್ನಂಪೇಟೆ ರಸ್ತೆ ಜಂಕ್ಷನ್‍ನಿಂದ ಕೆ.ಪಿ.ಟಿ.ಸಿ.ಎಲ್ ಕಚೇರಿಯವರೆಗೆ, ಪಾಲಿಬೆಟ್ಟ ರಸ್ತೆಯಲ್ಲಿ ಗೋಣಿಕೊಪ್ಪದ ಕೂರ್ಗ್ ಪಬ್ಲಿಕ್ ಸ್ಕೂಲ್ ರಸ್ತೆಯವರೆಗೆ ಮುಖ್ಯ ಬೀದಿಯಲ್ಲಿ ರಸ್ತೆಯ ಬದಿಯಲ್ಲಿ ವಾಹನಗಳ ನಿಲುಗಡೆಯನ್ನು ನಿಷೇಧಿಸಿದೆ.
ಮೈಸೂರಿನಿಂದ ತಿತಿಮತಿ, ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಬರುವ ವಾಹನಗಳಿಗೆ ತಿತಿಮತಿ, ಪಾಲಿಬೆಟ್ಟ, ಅಮ್ಮತ್ತಿ ಮಾರ್ಗವಾಗಿ ವೀರಾಜಪೇಟೆಗೆ ಹೋಗಲು ಬದಲಿ ಮಾರ್ಗದ ವ್ಯವಸ್ಥೆ.ವೀರಾಜಪೇಟೆಯಿಂದ ಗೋಣಿಕೊಪ್ಪ-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳಿಗೆ ಕೈಕೇರಿ ಗ್ರಾಮದ ಕಳತ್ಮಾಡ್-ಅತ್ತೂರು ಶಾಲೆ ಜಂಕ್ಷನ್-ಪಾಲಿಬೆಟ್ಟದ ಟಾಟಾ ಸ್ಟೋರ್
(ಮೊದಲ ಪುಟದಿಂದ) ಜಂಕ್ಷನ್-ತಿತಿಮತಿ ಮಾರ್ಗವಾಗಿ ಮೈಸೂರಿಗೆ ಹೋಗುವ ಬದಲಿ ಮಾರ್ಗದ ವ್ಯವಸ್ಥೆ. ಕೇರಳದಿಂದ ಪೆರುಂಬಾಡಿ-ಗೋಣಿಕೊಪ್ಪ ಮಾರ್ಗವಾಗಿ ಮೈಸೂರಿಗೆ ಹೋಗುವ ವಾಹನಗಳಿಗೆ ಪೆರುಂಬಾಡಿ-ವೀರಾಜಪೇಟೆ-ಸಿದ್ದಾಪುರ-ಪಿರಿಯಾಪಟ್ಟಣ-ಮೈಸೂರು ಕಡೆಗೆ ಬದಲಿ ಮಾರ್ಗದ ವ್ಯವಸ್ಥೆ. ವಿರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ-ಕಾನೂರು-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ವೀರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವದು. ಬಾಳಲೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಹೋಗುವ ವಾಹನಗಳು ಬಾಳಲೆ-ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವಿರಾಜಪೇಟೆಗೆ ಸಂಚರಿಸುವದು.
ಕುಟ್ಟ, ಶ್ರೀಮಂಗಲ, ಕಾನೂರು ಕಡೆಯಿಂದ ಗೋಣಿಕೊಪ್ಪ ಮಾರ್ಗವಾಗಿ ವೀರಾಜಪೇಟೆಗೆ ಹೋಗುವ ವಾಹನಗಳು ಪೊನ್ನಂಪೇಟೆ-ಕುಂದಾ-ಹಾತೂರು ಮಾರ್ಗವಾಗಿ ವೀರಾಜಪೇಟೆಗೆ ಸಂಚರಿಸುವದು. ಮೈಸೂರು-ತಿತಿಮತಿ-ಗೋಣಿಕೊಪ್ಪ-ಶ್ರೀಮಂಗಲ-ಕುಟ್ಟ ಕಡೆಗಳಿಗೆ ಹೋಗುವ ವಾಹನಗಳು ತಿತಿಮತಿ-ಕೋಣನಕಟ್ಟೆ-ಪೊನ್ನಪ್ಪಸಂತೆ-ನಲ್ಲೂರು-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವದು. ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ಗೋಣಿಕೊಪ್ಪ-ಮೈಸೂರು ಕಡೆಗೆ ಹೋಗುವ ವಾಹನಗಳು, ಕುಟ್ಟ-ಶ್ರೀಮಂಗಲ-ಪೊನ್ನಂಪೇಟೆ-ನಲ್ಲೂರು-ಪೊನ್ನಪ್ಪಸಂತೆ-ಕೋಣನಕಟ್ಟೆ-ತಿತಿಮತಿ ಮಾರ್ಗವಾಗಿ ಸಂಚರಿಸುವದು. ವೀರಾಜಪೇಟೆಯಿಂದ ಗೋಣಿಕೊಪ್ಪ ಮಾರ್ಗವಾಗಿ ಬಾಳಲೆ ಕಡೆಗೆ ಹೋಗುವ ವಾಹನಗಳಿಗೆ ವೀರಾಜಪೇಟೆ-ಹಾತೂರು-ಕುಂದಾ-ಪೊನ್ನಂಪೇಟೆ ಮಾರ್ಗವಾಗಿ ಸಂಚರಿಸುವದು.
ದಸರಾ ವೀಕ್ಷಣೆಗೆ ಗೋಣಿಕೊಪ್ಪಕ್ಕೆ ವೀರಾಜಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ ಕಾವೇರಿ ಕಾಲೇಜು ಮೈದಾನದಲ್ಲಿ, ಪೊನ್ನಂಪೇಟೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪ-ಪೊನ್ನಂಪೇಟೆ ರಸ್ತೆಯಲ್ಲಿರುವ ರುದ್ರಭೂಮಿಯ ಹಿಂದಕ್ಕೆ ಪೊನ್ನಂಪೇಟೆ ರಸ್ತೆಯ ಬದಿಯಲ್ಲಿ, ತಿತಿಮತಿ ಮತ್ತು ಬಾಳೆಲೆ ಕಡೆಯಿಂದ ಬರುವ ವಾಹನಗಳಿಗೆ ಗೋಣಿಕೊಪ್ಪಲು ಆರ್.ಎಂ.ಸಿ. ಆವರಣದಲ್ಲೂ ಹಾಗೂ ಪಾಲಿಬೆಟ್ಟ ಕಡೆಯಿಂದ ಬರುವ ವಾಹನಗಳಿಗೆ ಪಾಲಿಬೆಟ್ಟ ರಸ್ತೆಯಲ್ಲಿ ಶಾಸ್ತಾ ಇಂಡಸ್ಟ್ರೀಸ್ ನಿಂದ ಅತ್ತೂರು ಕಡೆಗೆ ರಸ್ತೆಯ ಒಂದು ಬದಿಯಲ್ಲಿ ವಾಹನ ನಿಲುಗಡೆ ವ್ಯವಸ್ಥೆ ಮಾಡಲಾಗಿದೆ.
ಈ ಬಗ್ಗೆ ಮೋಟಾರ್ ವಾಹನ ಕಾಯ್ದೆ 1988 ರ ಸೆಕ್ಷನ್ 116 ಹಾಗೂ ಕರ್ನಾಟಕ ಮೋಟಾರ್ ವಾಹನ ನಿಯಮ 1989ರ (ತಿದ್ದುಪಡಿ ನಿಯಮ 1990) ನಿಯಮ 221ಎ(2)ರಂತೆ ಅವಶ್ಯವಿರುವ ಸಂಜ್ಞೆ ಸೂಚನಾ ಫಲಕವನ್ನು ಅಳವಡಿಸಲು ಜಿಲ್ಲಾ ಪೆÇಲೀಸ್ ಅದಿsೀಕ್ಷಕರು, ಕೊಡಗು ಜಿಲ್ಲೆ, ಮಡಿಕೇರಿ ಇವರಿಗೆ ಅಧಿಕಾರ ನೀಡಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಪಿ.ಐ.ಶ್ರೀವಿದ್ಯಾ ಅವರು ತಿಳಿಸಿದ್ದಾರೆ.