ಸೋಮವಾರಪೇಟೆ, ಅ. 15: ಸಮೀಪದ ಗೋಣಿಮರೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಿರ್ಮಿಸಿರುವ ಕಾವೇರಿ ಪ್ರತಿಮೆಗೆ ತಾ. 17ರ ತುಲಾ ಸಂಕ್ರಮಣದಂದು ವಿಶೇಷ ಪೂಜೆ ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿದ್ದಲಿಂಗಪ್ಪ ತಿಳಿಸಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಪರಶುರಾಮ್ ಎಫ್. ದೊಡ್ಡಮನಿ ಮತ್ತು ಸಿವಿಲ್ ನ್ಯಾಯಾಧೀಶ ಭರತ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.