ಸೋಮವಾರಪೇಟೆ, ಅ. 16: ಇಲ್ಲಿನ ಸಂತ ಜೋಸೆಫರ ಪದವಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ವತಿಯಿಂದ ಸಂಸ್ಥಾಪನ ದಿನಾಚರಣೆ ನಡೆಯಿತು. ದಿನದ ಅಂಗವಾಗಿ ಕಾಲೇಜು ಆವರಣದಲ್ಲಿ ಗಿಡ ಗಳನ್ನು ನೆಡಲಾಯಿತು.

ಮುಖ್ಯ ಅತಿಥಿ ಗಳಾಗಿ ಪಾಲ್ಗೊಂಡಿದ್ದ ಕಾಲೇಜಿನ ಪ್ರಬಾರ ಪ್ರಾಂಶುಪಾಲರಾದ ಥಾಮಸ್ ಮಾತನಾಡಿ, ವಿದ್ಯಾರ್ಥಿಗಳು ಸೇವಾ ಮನೋಭಾವವನ್ನು ಬೆಳೆಸಿಕೊಳ್ಳುವದರ ಮೂಲಕ ರಾಷ್ಟ್ರ ನಿರ್ಮಾಣದ ಗುರಿಯನ್ನು ಹೊಂದಬೇಕೆಂದು ಹೇಳಿದರು.

ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ಕಾರ್ಯಕ್ರಮಾಧಿಕಾರಿ ಆನಂದ್, ಉಪನ್ಯಾಸಕರಾದ ಪೂರ್ಣಿಮ, ಹರೀಶ್, ಶಿವಕುಮಾರ್ ಮತ್ತಿತರರು ಉಪಸ್ಥಿತರಿದ್ದರು.