ಗೋಣಿಕೊಪ್ಪಲು,ಅ.16: ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಕಾವೇರಿ ದಸರಾ ಸಮಿತಿ ಇವರ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಸ್ವಾತಂತ್ರ್ಯ ಹೋರಾಟಗಾರರ ಭವನದಲ್ಲಿ ಇಂದು( ತಾ.17) ಪೂರ್ವಾಹ್ನ 10.30 ಗಂಟೆಗೆ ಜನೋತ್ಸವ ದಸರಾ ಬಹುಭಾಷಾ ಕವಿಗೋಷ್ಠಿ ನಡೆಯಲಿದೆ.

ವೀರಾಜಪೇಟೆ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮುಲ್ಲೇಂಗಡ ಮಧೋಶ್ ಪೂವಯ್ಯ ಅವರ ಅಧ್ಯಕ್ಷತೆಯಲ್ಲಿ ಜರುಗುವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ವೀರಾಜಪೇಟೆ ಸಾಹಿತಿ ಕುಲ್ಲಚಂಡ ಚಿಪ್ಪಿ ಕಾರ್ಯಪ್ಪ, ಕಾವೇರಿ ದಸರಾ ಸಮಿತಿ ಅಧ್ಯಕ್ಷ ಕುಲ್ಲಚಂಡ ಪ್ರಮೋದ್ ಗಣಪತಿ, ಗ್ರಾ.ಪಂ.ಅಧ್ಯಕ್ಷೆ ಸೆಲ್ವಿ ಹಾಗೂ ಗ್ರಾ.ಪಂ.ಸದಸ್ಯ ಬಿ.ಎನ್.ಪ್ರಕಾಶ್ ಭಾಗವಹಿಸಲಿದ್ದಾರೆ. ಸುಮಾರು 20ಕ್ಕೂ ಅಧಿಕ ಕವಿಗಳು ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲಿದ್ದಾರೆ ತಿಳಿಸಿದ್ದಾರೆ.